ಸುಳ್ಯ: ಅಕ್ಷತಾಳ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಆರೋಪಿ ಕಾರ್ತಿಕ್ಗೆ ಗಲ್ಲುಶಿಕ್ಷೆ ವಿಧಿಸಬೇಕು ಎಂದು ಭಜರಂಗದಳ ಜಿಲ್ಲಾ ಕಾರ್ಯದರ್ಶಿ ಶರಣ್ ಪಂಪ್ವೆಲ್ ಒತ್ತಾಯಿಸಿದ್ದಾರೆ.
ಸುಳ್ಯದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ವಿದ್ಯಾರ್ಥಿನಿ ಅಕ್ಷತಾಳ ಕೊಲೆ ನಡೆದಿರುವ ಈ ಕ್ರೂರ ಘಟನೆಯನ್ನು ಭಜರಂಗದಳ ಮತ್ತು ವಿಶ್ವಹಿಂದೂ ಪರಿಷತ್ ಕ್ರೂರವಾಗಿ ಖಂಡಿಸುತ್ತದೆ. ಸರಕಾರ ಈ ಕೂಡಲೇ ಅಕ್ಷತಾಳ ಕುಟುಂಬಕ್ಕೆ 10 ಲಕ್ಷ ರೂ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.
ಪ್ರೀತಿ-ಪ್ರೇಮದ ಹೆಸರಿನಲ್ಲಿ ದೌರ್ಜನ್ಯಕ್ಕೆ ಬಲಿಯಾಗಿರುವುದು ಕರಾವಳಿಯ ಹಿಂದೂ ಸಮಾಜಕ್ಕೆ ಆತಂಕ ಸೃಷ್ಟಿಯಾಗಿದ್ದು, ಅತ್ಯಾಚಾರ, ಕೊಲೆ, ಲವ್ ಜಿಹಾದ್ ಮುಖಂತರ ವಿದ್ಯಾರ್ಥಿನಿಯರ ಮತಾಂತರ ನಡೆಯುತ್ತಿದೆ. ಡ್ರಗ್ಸ್, ಗಾಂಜಾ ಸೇವನೆಯ ಮೂಲಕ ಹಿಂದೂ ಯುವತಿಯವರ ಬಾಳನ್ನು ನಾಶ ಮಾಡುವ ವ್ಯವಸ್ಥಿತವಾದ ಷಡ್ಯಂತ್ಯ ಜಿಲ್ಲೆಯಲ್ಲಿ ನಡೆಯುತ್ತಿದೆ ಎಂದು ಆರೋಪಿಸಿದರು.

