20-1497950412-rai-04-14-1502708975

ಕಲ್ಲಡ್ಕ: ಶ್ರೀರಾಮ ವಿದ್ಯಾಕೇಂದ್ರದಲ್ಲಿ ರಾಷ್ಟ್ರ ಭಕ್ತಿಯನ್ನು ಉದ್ದೀಪನಗೊಳಿಸುವ ಶಿಕ್ಷಣ ನೀಡುತ್ತಿದ್ದು, ಇದನ್ನು ಪ್ರತಿಯೊಬ್ಬ ವಿದ್ಯಾರ್ಥಿಯೂ ತನ್ನ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ವಿವೇಕಾನಂದ ವಿದ್ಯಾರ್ಧಕ ಸಂಘದ ಅಧ್ಯಕ್ಷ ಡಾ.ಪ್ರಭಾಕರ್ ಭಟ್ ಕಲ್ಲಡ್ಕ ಕರೆ ನೀಡಿದ್ದಾರೆ.

ಇಲ್ಲಿನ ಶ್ರೀರಾಮ ವಿದ್ಯಾಕೇಂದ್ರದಲ್ಲಿ  ಆಯೋಜಿಸಿದ್ದ ದೀಪ ಪ್ರದಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು,  ಇಂದು ದೇಶದ ಜನತೆಯಲ್ಲಿ ದೇಶಭಕ್ತಿ ಕೊರೆತೆಯಿದ್ದು, ಇದರಿಂದ ವಿದೇಶಿ ಆಕ್ರಮಣಗಳು ಹೆಚ್ಚೆಚ್ಚು ನಡೆಯುತ್ತಿದೆ ದು ಆತಂಕ ವ್ಯಕ್ತಪಡಿಸಿದರು.

ಡಾ.ನಿಮ್ಮಿ ಶೆಟ್ಟಿ ಮಾತನಾಡಿ, ರಾಷ್ಟ್ರಭಕ್ತಿವುಳ್ಳ ವ್ಯಕ್ತಿತ್ವವನ್ನು ಹೊಂದಿದ ವಿದ್ಯಾರ್ಥಿಗಳನ್ನು ಹೊರತರುವಲ್ಲಿ ಈ ವಿದ್ಯಾಕೇಂದ್ರ ಬೆಳೆಯಲಿ ಎಂದು ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ವಿದ್ಯಾಕೇಂದ್ರದ ಅಧ್ಯಕ್ಷ ಬಿ.ನಾರಾಯಣ ಸೋಮಯಾಜಿ ಅಧ್ಯಕ್ಷತೆ ವಹಿಸಿದ್ದರು. ಬೆಂಗಳೂರಿನ ಉದ್ಯಮಿ ಹರಿರಾಜ ಶೆಟ್ಟಿ, ಜಿ.ಪಂ. ಮಾಜಿ ಸದಸ್ಯ ಸುಬ್ರಹ್ಮಣ್ಯ ಶಾಸ್ತ್ರೀ, ಶ್ರೀಕಲಾ ಶಾಸ್ತ್ರೀ, ಶಿವಕುಮಾರ ಗೌಡ, ಅಶೋಕ್ ಕುಮಾರ್, ಪ್ರದೀಪ್, ನಿವೃತ ಸೈನಿಕ ಪವನ್ ಅಂಜಯ್ಯ, ಡಾ.ಕಮಲಾ ಪ್ರಭಾಕರ ಭಟ್, ವಿದ್ಯಾಕೇಂದ್ರದ ಸಂಚಾಲಕ ವಸಂತ ಮತ್ತಿತರರು ಉಪಸ್ಥಿತರಿದ್ದರು.

ಸಹಶಿಕ್ಷಕ ಜಿನ್ನಪ್ಪ ಸ್ವಾಗತಿಸಿ, ಸಹಶಿಕ್ಷಕ ಮನೋಜ್ ವಂದಿಸಿ, ಶಾಂಭವಿ ಕಾರ್ಯಕ್ರಮ ನಿರೂಪಿಸಿದರು.

By Suddi9

Leave a Reply

Your email address will not be published. Required fields are marked *