ಕಾರವಾರ: ಬೈಕ್ ಗೆ ಟಿಪ್ಪರ್ ಢಿಕ್ಕಿಯಾದ ಪರಿಣಾಮ ಬೈಕ್ ನಲ್ಲಿದ್ದ ಮಗು ಸೇರಿ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ನಗರದ ಬಿಣಗಾದ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಮಂಗಳವಾರ ನಡೆದಿದೆ.
ಉತ್ತರ ಪ್ರದೇಶ ಮೂಲದ ಅಮಿತ್ ಕೌಶಲ್ (31), ಪತ್ನಿ ಜ್ಯೋತಿ ಗುಪ್ತಾ (25) ಹಾಗೂ ದಂಪತಿಯ 2 ವರ್ಷದ ಮಗು ಮೃತರು ಎಂದು ಗುರುತಿಸಲಾಗಿದೆ.
ಅಮಿತ್ ಕೌಶಲ್ ಕದಂಬ ಅವರು ತನ್ನ ಕುಟುಂಬ ಸಮೇತ ಬಿಣಗಾದಿಂದ ಕಾರವಾರ ಕಡೆ ಬೈಕ್ ನಲ್ಲಿ ಚಲಿಸುತ್ತಿದ್ದಾಗ ಕಾರವಾರ ದಿಂದ ಅಂಕೋಲ ಕಡೆ ಹೋಗುತಿದ್ದ ಟಿಪ್ಪರ್ ಢಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ನಡೆದಿದೆ. ಘಟನೆಗೆ ಟಿಪ್ಪರ್ ಚಾಲಕನ ಅಜಾಗರೂಕತೆಯ ಕಾರಣ ಎನ್ನಲಾಗಿದೆ.
ಈ ಬಗ್ಗೆ ಕಾರವಾರ ಸಂಚಾರಿ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

