muthalik

ಮಂಗಳೂರು: ಬಿಜೆಪಿಗರು ಮೋಸ ಮತ್ತು ಅಧಿಕಾರದ ದಾಹಕ್ಕಾಗಿ ಜನಸುರಕ್ಷಾ ಯಾತ್ರೆ ಮಾಡುತ್ತಿದ್ದು, ಇದು ಕೇವಲ ಢೋಂಗಿ ರಾಜಕಾರಣ ಎಂದು ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ವಾಗ್ದಾಳಿ ನಡೆಸಿದ್ದಾರೆ.

ಮಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಶಿವಸೇನೆ ರಾಜ್ಯ ವಿಧಾನ ಸಭಾ ಚುನಾವಣೆಗೆ ಕಣಕ್ಕಿಳಿದ್ದು, ಈಗಾಗಲೇ 52 ಕಡೆ ಸ್ಪರ್ಧಿಸಲು ತಯಾರಿ ನಡೆಸಿದ್ದೇವೆ. ಕರ್ನಾಟಕದಲ್ಲಿ ಶಿವಸೇನೆ ಇತಿಹಾಸ ನಿರ್ಮಿಸುವ ವಿಶ್ವಾಸವಿದೆ ಎಂದು ತಿಳಿಸಿದರು.

ಭಟ್ಕಳ ಬಿಜೆಪಿ ಶಾಸಕ ಚಿತ್ತರಂಜನ್ ಕೊಲೆ ಪ್ರಕರಣದಲ್ಲಿ ಇದುವರೆಗೂ ಆರೋಪಿಗಳ ಪತ್ತೆಯಾಗಿಲ್ಲ. ಭಟ್ಕಳದಲ್ಲಿ ನಡೆದ 21 ಜನರ ಕೊಲೆ ಪ್ರಕರಣವನ್ನು ಈವರೆಗೂ ಭೇದಿಸಲು ಸಾಧ್ಯವಾಗಿಲ್ಲ ಎಂದು ಟೀಕಿಸಿದರು.

By Suddi9

Leave a Reply

Your email address will not be published. Required fields are marked *