ಧಾರವಾಡ: ಅಕ್ರಮ ಮದ್ಯ ಸಾಗಿಸುತ್ತಿದ್ದ ನಾಲ್ವರರನ್ನು ಅಬಕಾರಿ ಉಪನಿರೀಕ್ಷಕರು ವಶಕ್ಕೆ ಪಡೆದಿರುವ ಘಟನೆ ತಾಲೂಕಿನ ಉಪ್ಪಿನ ಬೆಟಗೇರಿ ಗ್ರಾಮದ ಹನುಮನಹಾಳ ಕ್ರಾಸ್ ಬಳಿ ನಡೆದಿದೆ.
ಬಂಧಿತ ಆರೋಪಿಗಳು ವಾಹನದಲ್ಲಿ ಗೋವಾ ರಾಜ್ಯದ ಮದ್ಯದ ಬಾಟಲಿಗಳನ್ನು ಸಂಗ್ರಹಿಸಿ ಮಾರಾಟ ಮಾಡಲು ಮುಂದಾಗುತ್ತಿದ್ದ ವೇಳೆ ಖಚಿತ ಮಾಹಿತಿ ಪಡೆದ ಅಬಕಾರಿ ಉಪನಿರೀಕ್ಷಕರು ದಾಳಿ ನಡೆಸಿ ಸರಕು ಸಮೇತ ನಾಲ್ವರನ್ನು ಬಂಧಿಸಿದ್ದಾರೆ.
ಪ್ರಕರಣ ದಾಖಲಿಸಿದ ಪೊಲೀಸರು ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

