ಇಸ್ಲಾಮಾಬಾದ್: ಪಾಕಿಸ್ತಾನದ ಪ್ರಧಾನಿ ನವಾಜ್ ಷರೀಫ್ ರಾಜಿನಾಮೆಗೆ ಒತ್ತಡ ಹೆಚ್ಚಾಗಿದ್ದು, ದೇಶಾದ್ಯಂತ ಬಂಡಾಯದ ಅಲೆ ಎದ್ದಿದೆ.
ಪಾಕಿಸ್ತಾನದಲ್ಲಿ ಮತ್ತೆ ಬಂಡಾಯ ಭುಗಿಲೆದ್ದಿದೆ. ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ನೇತೃತ್ವ ಬಂಡಾಯಗಾರರು ಪ್ರಧಾನಿ ನವಾಜ್ ಷರೀಫ್ ರಾಜೀನಾಮೆಗೆ ಪಟ್ಟು ಹಿಡಿದಿದ್ದಾರೆ. ಇಂದು ಬಂಡಾಯಗಾರರಿಂದ ನಿಷೇಧಿತ ರೆಡ್ ಝೋನ್ ಪ್ರವೇಶವಾಗಿದೆ. ಈ ಹಿನ್ನೆಲೆಯಲ್ಲಿ ಇಸ್ಲಾಮಾಬಾದ್ನಲ್ಲಿ ಸೇನೆಯ ಬಿಗಿ ಭದ್ರತೆ ಕಲ್ಪಿಸಲಾಗಿದೆ.
ಆದರೆ, ಯಾವುದೇ ಕಾರಣಕ್ಕೂ ರಾಜೀನಾಮೆ ಕೊಡಲ್ಲ ಎಂದು ಷರೀಫ್ ಹೇಳಿದ್ದಾರೆ. ಷರೀಫ್ ರಾಜಿನಾಮೆಗೆ ಒತ್ತಾಯಿಸಿ ಕೈಗೊಂಡಿರುವ ಪ್ರತಿಭಟನೆ ತೀವ್ರವಾಗಿದ್ದು, ಷರೀಪ್ ನಡುಗಿಹೋಗಿದ್ದಾರೆ ಎಂದು ತಿಳಿದು ಬಂದಿದೆ.