shobha-karandlaje

ಬೈಂದೂರು: ಬಿಜೆಪಿಯ ಜನಸುರಕ್ಷಾ ಯಾತ್ರೆ ಇಲ್ಲಿನ ಬೈಂದೂರಿನ ಶ್ರೀ ಶನೀಶ್ವರ ದೇವಸ್ಥಾನದ ಮುಂಭಾಗದಲ್ಲಿ ನಡೆಯಿತು.

ಈ ವೇಳೆ ಸಂಸದೆ ಶೋಭಾ ಕರಂದ್ಲಾಜೆ ಮಾತನಾಡಿ, ಬಿಜೆಪಿ ಹಾಗೂ ಸಂಘಪರಿವಾರವು ಜತೆಗೂಡಿ ಯಾತ್ರೆಯಲ್ಲಿ ಕೈಜೋಡಿಸಿದ್ದು, ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಬಹುಮತದಿಂದ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದವರು, ಕಾಂಗ್ರೆಸ್ ಆಡಳಿತದಲ್ಲಿ ಅಮಾಯಕರ ಹತ್ಯೆ ನಡೆದಿದೆ ಎಂದು ಆರೋಪಿಸಿದರು.

ಬಿಜೆಪಿ ಕಾರ್ಯಕರ್ತರನ್ನು ಗುರಿಯಾಗಿಟ್ಟುಕೊಂಡು ಕರ್ನಾಟಕದಲ್ಲಿ ಹತ್ಯೆ ಮಾಡಲಾಗುತ್ತಿದೆ. ಆದರೆ ರಾಜ್ಯ ಸರಕಾರ ಕಾನೂನು ಸುವ್ಯವಸ್ಥೆಯನ್ನು ಕಾಪಾಡಲು ಏನೂ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಕಿಡಿಕಾರಿದರು.

ವಿರೋಧ ಪಕ್ಷದ ನಾಯಕ ಕೆ.ಎಸ್. ಈಶ್ವರಪ್ಪ ಮಾತನಾಡಿ, ಮಠ- ಮಂದಿರ ವಶಪಡಿಸಿಕೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂದಾಗುತ್ತಾರೆ. ಆದರೆ ಅನ್ಯ ಧರ್ಮದ ಧಾರ್ಮಿಕ ಕೇಂದ್ರಗಳ ವಿಷಯ ಬಂದಾಗ ಅವರ ಗಂಡಸ್ತನ ಎಲ್ಲಿಗೆ ಹೋಗಿರುತ್ತದೆ. ಸಿದ್ದರಾಮಯ್ಯ ಅವರ ಮೈಯಲ್ಲಿ ಟಿಪ್ಪು ಸುಲ್ತಾನ್ ರಕ್ತ ಹರಿಯುತ್ತಿದೆ ಅದಕ್ಕೇ ಅವರು ಜಯಂತಿ ಆಚರಿಸುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

By suddi9

Leave a Reply

Your email address will not be published. Required fields are marked *