ಬೆಂಗಳೂರು: ಸ್ಯಾಂಡಲ್ ವುಡ್ ನ ಕಾರ್ತಿಕ್ ಮೇಲೆ ದುಷ್ಕರ್ಮಿಗಳ ತಂಡ ಹಲ್ಲೆ ನಡೆಸಿ ಕಾರು, ಹಣ ಮತ್ತು ಮೊಬೈಲ್ ಕದ್ದು ಪರಾರಿಯಾಗಿರುವ ಘಟನೆ ನಿನ್ನೆ ರಾತ್ರಿ ಬಸವೇಶ್ವರ ನಗರದಲ್ಲಿ ನಡೆದಿದೆ.
ನಾಗವಲ್ಲಿ ವರ್ಸಸ್ ಆಪ್ತಮಿತ್ರರು ಚಿತ್ರದಲ್ಲಿ ನಾಯಕರಾಗಿ ನಟಿಸಿರುವ ಕಾರ್ತಿಕ್ ವಿಕ್ರಂ ಮೇಲೆ ಹಲ್ಲೆ ನಡೆಸಲಾಗಿದೆ. ನಿನ್ನೆ ತಡರಾತ್ರಿ ಕಾರ್ತಿಕ್ ವಿಕ್ರಮ್ ತಮ್ಮ ಕಾರಿನಲ್ಲಿ ಹೋಗುವಾಗ ಈ ಘಟನೆ ನಡೆದಿದೆ.
8 ಮಂದಿ ದುಷ್ಕರ್ಮಿಗಳ ತಂಡ ಕಾರ್ತಿಕ್ ವಿಕ್ರಮ್ ತಮ್ಮ ಕಾರಿನಲ್ಲಿ ಮನೆಗೆ ಹೋಗುತ್ತಿದ್ದಾಗ ಅಡ್ಡಗಟ್ಟಿ ಹಲ್ಲೆ ನಡೆಸಿದೆ. ಕಾರಿನಿಂದ ಕಾರ್ತಿಕ್ ವಿಕ್ರಮ್ ನನ್ನು ಹೊರಗೆಳೆದು ಹಲ್ಲೆ ಮಾಡಿ ಆತನ ಬಳಿ ಇದ್ದ 50 ಸಾವಿರ ರೂ. ಒಂದು ಮೊಬೈಲ್ ಮತ್ತು ಸ್ವಿಫ್ಟ್ ಕಾರು ಕಸಿದುಕೊಂಡು ಪರಾರಿಯಾಗಿದ್ದಾರೆ.

