ಬಾಗಲಕೋಟೆ: ಚಾಲಕನ ನಿಯಂತ್ರಣ ತಪ್ಪಿದ ಆಟೋಂದು ಪಲ್ಟಿಯಾದ ಪರಿಣಾಮ ಆಟೋದಲ್ಲಿದ್ದ ಶಿಕ್ಷಕಿ ಸೇರಿ ಮೂವರು ಸ್ಥಳದಲ್ಲೇ ಮೃತಪಟ್ಟಿರೆ, ನಾಲ್ವರು ಗಾಯಗೊಂಡ ದಾರುಣ ಘಟನೆ ಜಿಲ್ಲೆಯ ಬಾದಾಮಿ ತಾಲೂಕಿನ ಆಲದಕಟ್ಟೆ ಬಳಿ ಗುರುವಾರ ನಡೆದಿದೆ.
ಶಿಕ್ಷಕಿ ಗಂಗಮ್ಮ ಗಾಣಿಗೇರ(48), ಚಂದ್ರಪ್ಪ(50) ಸನ್ನಿಧಿ ತಳವಾರ(5) ಮೃತಪಟ್ಟವರೆಂದು ಗುರುತಿಸಲಾಗಿದೆ.
ಈ ದುರ್ಘಟನೆಯಲ್ಲಿ ಗಾಯಗೊಂಡವರನ್ನು ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.
ಸುದ್ದಿ ತಿಳಿದು ಸ್ಥಳಕ್ಕಾಗಮಿಸಿದ ಬಾದಾಮಿ ಠಾಣೆ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿದ್ದಾರೆ.

