ಮಂಗಳೂರು: ಗುಜರಿ ಅಂಗಡಿಯೊಂದಕ್ಕೆ ಆಕಸ್ಮಿಕ ಬೆಂಕಿ ತಗುಲಿ ಲಕ್ಷಾಂತರ ರೂ. ಮೌಲ್ಯ ಸೊತ್ತು ಸುಟ್ಟು ಕರಕಲಾದ ಘಟನೆ ನಗರದ ಬಂದರಿನಲ್ಲಿ ಶುಕ್ರವಾರ ನಡೆದಿದೆ.
ಈ ಅವಘಡ ಬಂದರ್ ನ ಬೀಬಿ ಅಲಾಬಿ ರಸ್ತೆಯಲ್ಲಿರುವ ಗುಜರಿ ಅಂಗಡಿಯಲ್ಲಿ ಸುಮಾರು 6 ಗಂಟೆಗೆ ನಡೆದಿದ್ದು, ಶಾರ್ಟ್ ಸರ್ಕ್ಯೂಟ್ ನಿಂದಾಗಿ ಅವಘಡ ನಡೆದಿರಬಹುದು ಎಂದು ಶಂಕಿಸಲಾಗಿದೆ. ಇನ್ನು ಬೆಂಕಿಯ ಕೆನ್ನಾಲಿಗೆಗೆ ಗುಜರಿ ಅಂಗಡಿ ಪಕ್ಕದ ಇತರ ಅಂಗಡಿಗಳಿಗೂ ಹಾನಿಯಾಗಿದೆ ಎಂದು ತಿಳಿದು ಬಂದಿದೆ.
ಸುದ್ದಿ ತಿಳಿದು ಸ್ಥಳಕ್ಕಾಗಮಿಸಿದ ಅಗ್ನಿಶಾಮದಳದ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದ್ದಾರೆ.


