ಮಂಗಳೂರು: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನೀಡಲಾಗುವ 2017ನೇ ಸಾಲಿನ ಪ.ಗೋ. ಗ್ರಾಮೀಣ ವರದಿಗಾರಿಕೆ ಪ್ರಶಸ್ತಿಗೆ ‘ವಿಜಯವಾಣಿ’ ಪತ್ರಿಕೆಯ ಉಪಸಂಪಾದಕ ಪ್ರಶಾಂತ್ ಎಸ್. ಸುವರ್ಣ ಸಿದ್ದಕಟ್ಟೆ  ಆಯ್ಕೆಯಾಗಿದ್ದಾರೆ.

ಮಾ. 22ರಂದು ಬೆಳಗ್ಗೆ 11ಕ್ಕೆ  ಪ್ರಶಸ್ತಿ ಪ್ರದಾನ ಸಮಾರಂಭವು ಪತ್ರಿಕಾ ಭವನದಲ್ಲಿ ನಡೆಯಲಿದ್ದು, ಅಂದು ಪ್ರಶಾಂತ್ ಅವರಿಗೆ ಹಿರಿಯ ಪತ್ರಕರ್ತೆ ಅನಿತಾ ಪಿಂಟೋ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಸಮಾರಂಭದ ಅಧ್ಯಕ್ಷತೆಯನ್ನು ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಜಗನ್ನಾಥ ಶೆಟ್ಟಿ ಬಾಳ ವಹಿಸಲಿದ್ದಾರೆ.

ಪ್ರಶಸ್ತಿಯು 10,001 ರೂ., ಪ್ರಶಸ್ತಿ ಪತ್ರ ಹಾಗೂ ಸ್ಮರಣಿಕೆಯನ್ನು ಒಳಗೊಂಡಿದೆ.  2017ರ ಜೂನ್ 03ರಂದು ವಿಜಯವಾಣಿ ಪತ್ರಿಕೆಯಲ್ಲಿ ಪ್ರಕಟವಾದ “ಕೇಳಿಸದೆ ನಮ್ಮ ಕರುಳಿನ ಕೂಗು?’’ ಅವರ ಈ ವರದಿಗೆ ಪ್ರಶಸ್ತಿ ಲಭಿಸಿದೆ ಎಂದು ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ ನಾಯಕ್ ಇಂದಾಜೆ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

 

By Suddi9

Leave a Reply

Your email address will not be published. Required fields are marked *