393b3fc52bc1b41d2e22416a0721dbea

ಬರ್ದ್ವಾನ್: ಲೆನಿನ್​, ಪೆರಿಯಾರ್​, ಅಂಬೇಡ್ಕರ್ ನಂತರ ಈಗ ದೇಶದ ಮೊದಲ ಪ್ರಧಾನಿ ಜವಾಹರ್​ ಲಾಲ್​ ನೆಹರೂ ಅವರ ಪ್ರತಿಮೆಗೆ ದುಷ್ಕರ್ಮಿಗಳು ಕಪ್ಪು ಬಣ್ಣ ಎರಚಿ ಅವಮಾನ ಮಾಡಿದ್ದಾರೆ.

ಪಶ್ಚಿಮ ಬಂಗಾಳದ ಕಟ್ವಾ ಪಟ್ಟಣದಲ್ಲಿರುವ ಮಾಜಿ ಪ್ರಧಾನಿ ನೆಹರೂ ಅವರ ಪ್ರತಿಮೆಗೆ ಶನಿವಾರ ಕಿಡಿಗೇಡಿಗಳು ಕಪ್ಪು ಇಂಕ್​ ಎರಚಿ ವಿರೂಪಗೊಳಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಗೆ ಬಿಜೆಪಿ ಕಾರಣ ಎಂದು ಕಾಂಗ್ರೆಸ್ ಆರೋಪಿಸಿದೆ. ಕಾಂಗ್ರೆಸ್ ಆರೋಪವನ್ನು ಬಿಜೆಪಿ ಸ್ಪಷ್ಟವಾಗಿ ತಳ್ಳಿಹಾಕಿದೆ.

ಕಟ್ವಾದ ಟೆಲೆಫೋನ್ ಮೈದಾನದಲ್ಲಿರುವ ನೆಹರೂ ಪ್ರತಿಮೆಗೆ ಕಪ್ಪು ಬಣ್ಣ​ ಎರಚಿರುವುದನ್ನು ಗಮನಿಸಿದ ಸ್ಥಳೀಯರು, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ತನಿಖೆ ಆರಂಭಿಸಿದ್ದಾರೆ.

ಘಟನೆಯ ಬಳಿಕ ಕಾಂಗ್ರೆಸ್ ಕಾರ್ಯಕರ್ತರು ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ ನಡೆಸಿ, ಕಿಡಿಗೇಡಿಗಳನ್ನು ಕೂಡಲೇ ಬಂಧಿಸಬೇಕು ಎಂದು ಒತ್ತಾಯಿಸಿದ್ದಾರೆ.

By suddi9

Leave a Reply

Your email address will not be published. Required fields are marked *