ಮಂಗಳೂರು: ಭರ್ಜರಿ ಕಾರ್ಯಾಚರಣೆ ನಡೆಸಿದ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು 1.20ಕೋಟಿ ಮೌಲ್ಯದ ಚಿನ್ನದ ಬಿಸ್ಕತ್ತು ವಶಪಡಿಸಿಕೊಂಡಿದ್ದಾರೆ.
ದುಬೈ ನಿಂದ ಬಂದ ವಿಮಾನದ ಟಾಯ್ಲೆಟ್ ನಲ್ಲಿ ಅಕ್ರಮ ಚಿನ್ನದ ಬಿಸ್ಕತ್ತು ಪತ್ತೆಯಾಗಿದೆ. ವಶಪಡಿಸಿಕೊಳ್ಳಲಾದ ಬಿಸ್ಕೆಟ್ ಗಳ ಮೌಲ್ಯ 1.20ಕೋಟಿ ಎಂದು ತಿಳಿದುಬಂದಿದೆ. ಚಿನ್ನ ವಶಕ್ಕೆ ಪಡೆದು ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ.

