ಕುಪ್ವಾರ(ಜಮ್ಮು ಮತ್ತು ಕಾಶ್ಮೀರ): ಜಮ್ಮು -ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಭಾರತೀಯ ಸೇನೆ ನಾಲ್ವರು ಭಯೋತ್ಪಾದಕರನ್ನು ಹೊಡೆದುರುಳಿಸಿದೆ.
ಅರಂಪೋರಾದ ಅರಣ್ಯ ಪ್ರದೇಶದಲ್ಲಿ ಅಡಗಿದ್ದ ಭಯೋತ್ಪಾದಕರ ಮೇಲೆ ಭಾರತೀಯ ಸೇನೆ ಮತ್ತು ರಾಜ್ಯ ಪೊಲೀಸ್ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ನಾಲ್ವರು ಉಗ್ರರನ್ನು ಸದೆಬಡೆದಿದೆ ಎಂದು ಸೇನಾ ವಕ್ತಾರರು ತಿಳಿಸಿದ್ದಾರೆ.
ಇನ್ನು ಭಯೋತ್ಪಾದಕರು ಮತ್ತು ಭಾರತೀಯ ಸೇನೆ ನಡುವೆ ಗುಂಡಿನ ದಾಳಿ ಮುಂದುವರೆದಿದೆ. ಘಟನಾ ಸ್ಥಳಕ್ಕೆ ಹೆಚ್ಚುವರಿಯಾಗಿ ಭದ್ರತಾ ಪಡೆಗಳನ್ನು ರವಾನಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

