1 (2)

ಬಂಟ್ವಾಳ: ಫರಂಗಿಪೇಟೆ ಖಿದ್ಮತುಲ್ ಇಸ್ಲಾಂ ಅಸೋಸಿಯೇಶನ್ ವತಿಯಿಂದ ಮುಹಿಯುದ್ದೀನ್ ಜುಮಾ ಮಸೀದಿಯ ಸಹಯೋಗದಲ್ಲಿ 9 ಜೋಡಿಗಳ ಸರಳ ಸಾಮೂಹಿಕ ವಿವಾಹ ಇಲ್ಲಿನ ಫರಂಗಿಪೇಟೆಯ ನದಿ ತಟದಲ್ಲಿ ರವಿವಾರ ನಡೆಯಿತು.

15

ಈ ವೇಳೆ ದ.ಕ.ಜಿಲ್ಲಾ ಖಾಝಿ ಅಲ್ಹಾಜ್ ತ್ವಾಖಾ ಅಹ್ಮದ್ ಮುಸ್ಲಿಯಾರ್ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ಬಡ ಹೆಣ್ಣು ಮಕ್ಕಳ ಮದುವೆಗೆ ಸಹಾಯ ಮಾಡುವುದು ಪ್ರತಿಯೊಬ್ಬನ ಮೇಲಿರುವ ಜವಾಬ್ದಾರಿಯಾಗಿದ್ದು, ಇದಕ್ಕೆ ದಾನಿಗಳು ಕೂಡ ಕೈಜೋಡಿಸಲು ಮುಂದಾಗಬೇಕು ಎಂದು ಕರೆ ನೀಡಿದರು.

20

ಕಾರ್ಯಕ್ರಮದಲ್ಲಿ ಅಧ್ಯಕ್ಷತೆಯನ್ನು ಫರಂಗಿಪೇಟೆ ಮುಹಿಯುದ್ದೀನ್ ಜುಮಾ ಮಸೀದಿ ಅಧ್ಯಕ್ಷ ಎಫ್. ಅಹ್ಮದ್ ಬಾವಾ ವಹಿಸಿದ್ದರು. ಸಂಯೋಜಕ  ಎಫ್. ಉಮರ್ ಫಾರೂಕ್, ಸಮಸ್ತ ಕೇಂದ್ರ ಮುಶಾವರ ಸದಸ್ಯ ಶೈಖುನಾ ಅಲ್ ಹಾಜ್ ಅಬ್ದುಲ್ ಜಬ್ಬಾರ್ ಉಸ್ತಾದ್ ಮಿತ್ತಬೈಲು, ಅಬ್ಬಾಸ್ ದಾರಿಮಿ, ತಾ.ಪಂ. ಅಧ್ಯಕ್ಷ ಮೊಹಮ್ಮದ್ ಮೋನು ಮತ್ತಿತರರು ಉಪಸ್ಥಿತರಿದ್ದರು.

2 (3)

By suddi9

Leave a Reply

Your email address will not be published. Required fields are marked *