ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟಿ ಜಯಂತಿ ಅವರು ಅಸ್ವಸ್ಥರಾಗಿ ನಗರದ ವಿಕ್ರಮ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದು, ಆರೋಗ್ಯದ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಜಯಂತಿ ಅವರು ಹಲವು ವರ್ಷಗಳಿಂದ ಅಸ್ತಮಾದಿಂದ ಬಳಲುತ್ತಿದ್ದರು. ಉಸಿರಾಟದಲ್ಲಿ ತೊಂದರೆ ಕಾಣಿಸಿಕೊಂಡಿದ್ದರಿಂದ ವಿಕ್ರಮ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ವಿಕ್ರಮ್ ಆಸ್ಪತ್ರೆಯ ವೈದ್ಯ ಡಾ. ಸತೀಶ್ ನೇತೃತ್ವದಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ತೀವ್ರ ನಿಘಾ ಘಟಕದಲ್ಲಿ ಚಿಕಿತ್ಸೆ ಮುಂದುವರೆಸಲಾಗಿದೆ. ನಟಿ ಜಯಂತಿಗೆ ಕೃತಕ ಉಸಿರಾಟದ ವ್ಯವಸ್ಥೆ ಮಾಡಲಾಗಿದ್ದು, ಮುಂದಿನ 24 ಗಂಟೆಯವರೆಗೂ ಏನು ಹೇಳಲಾಗುವುದಿಲ್ಲ ಎಂದು ವೈದ್ಯ ಡಾ. ಸತೀಶ್ ತಿಳಿಸಿದ್ದಾರೆ.
ನಟಿ ಜಯಂತಿ ಅನಾರೋಗ್ಯದ ಸುದ್ದಿ ತಿಳಿದು ಚಿತ್ರರಂಗದ ಹಲವು ಕಲಾವಿದರು ಆಸ್ಪತ್ರೆಗೆ ಧಾವಿಸಿ ಜಯಂತಿ ಅವರ ಯೋಗ ಕ್ಷೇಮ ವಿಚಾರಿಸುತ್ತಿದ್ದಾರೆ.

