vikram-360x165

ಬೆಂಗಳೂರು: ನಟಿ ಜಯಂತಿ ಅವರ ಆರೋಗ್ಯದಲ್ಲಿ ಚೇತರಿಕೆಯಾಗಿದ್ದು, ಬೇರೆ ವದಂತಿಗಳನ್ನು ಹಬ್ಬಿಸಬೇಡಿ ಎಂದ ವಿಕ್ರಂ ಆಸ್ಪತ್ರೆ ವೈದ್ಯರು ಮನವಿ ಮಾಡಿದ್ದಾರೆ.

ವಿಕ್ರಂ ಆಸ್ಪತ್ರೆಯಲ್ಲಿ ವೈದ್ಯರಾದ ಸತೀಶ್ ಮತ್ತು ವಿಜಯ್ ಜಂಟಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ನಟಿ ಜಯಂತಿ ಅವರಿಗೆ ಅಸ್ತಮಾ ಜಾಸ್ತಿಯಾಗಿ ಉಸಿರಾಟದ ತೊಂದರೆಯಾಗಿತ್ತು. ತುರ್ತು ಚಿಕಿತ್ಸೆ ನೀಡಲಾಗಿದ್ದು, ಸದ್ಯ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡಿದೆ ಎಂದು ವೈದ್ಯರು ಸ್ಪಷ್ಟಪಡಿಸಿದ್ದಾರೆ.

ಕೃತಕ ಉಸಿರಾಟ ಕವಚ ತಗೆದು ನಾಳೆ ಅವರನ್ನು ವಾರ್ಡ್ ಗೆ ಶಿಫ್ಟ ಮಾಡಲಾಗುವುದು. ಬಳಿಕ ಅವರು ಮಾತನಾಡಲಿದ್ದಾರೆ. ಇಲ್ಲ ಸಲ್ಲದ ವದಂತಿಗಳನ್ನು ಹಬ್ಬಿಸಬೇಡಿ. ಇದೇ ವಾರ ಕೊನೆಯಲ್ಲಿ ಅವರನ್ನ ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಮಾಡುವ ಸಾಧ್ಯತೆ ಇದೆ ಎಂದಿದ್ದಾರೆ.

By suddi9

Leave a Reply

Your email address will not be published. Required fields are marked *