ಅಥಣಿ: ಭೀಕರ ಸರಣಿ ಅಪಘಾತ ಸಂಭವಿಸಿದ ಪರಿಣಾಮ 10 ಕ್ಕೂ ಹೆಚ್ಚು ಮಂದಿ ಗಂಭೀರ ಗಾಯಗೊಂಡ ಘಟನೆ ಇಲ್ಲಿನ ವಿಜಯಪುರ, ಸಂಕೇಶ್ವರ್ ರಾಜ್ಯ ಹೆದ್ದಾರಿ 12 ತೆಲಸಂಗ ಗ್ರಾಮದ ಬಳಿ ಬುಧವಾರ ಸಂಜೆ ನಡೆದಿದೆ.
2 ಕಾರು, ಲಾರಿ, ಟಂಟಂ, ಬೈಕ್ ಮಧ್ಯೆ ಸರಣಿ ಅಪಘಾತ ಸಂಭವಿಸಿದ್ದು, 10 ಮಂದಿ ಗಂಭೀರ ಗಾಯಗೊಂಡ ಗಾಯಾಳುಗಳನ್ನು ಅಥಣಿ ತಾಲೂಕು ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ.
ಅಪಘಾತದಿಂದ ಸುಮಾರು ಒಂದು ಕಿ.ಮೀ. ಗೂ ಹೆಚ್ಚು ವಾಹನಗಳು ನಿಂತಿದ್ದು, ಸ್ಥಳಕ್ಕೆ ಭೇಟಿ ನೀಡಿದ ಐಗಳಿ ಠಾಣೆ ಪೊಲೀಸರು ವಾಹನ ಸಂಚಾರಕ್ಕೆ ಅನುಮಾಡಿಕೊಡಲು ಹರಸಾಹಸ ಪಡುತ್ತಿದ್ದಾರೆ.
ಈ ಸಂಬಂಧ ಐಗಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

