ಮಂಗಳೂರು: ಕೆಪಿಸಿಸಿ ಹಿಂದುಳಿದ ವರ್ಗಗಳ ವಿಭಾಗದ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ದೀಪಕ್ ಕೋಟ್ಯಾನ್ ನೇಮಕಗೊಂಡಿದ್ದಾರೆ.
ಕಾಂಗ್ರೆಸ್ ನ ರಾಜ್ಯ ಹಾಗೂ ರಾಷ್ಟ್ರೀಯ ವರಿಷ್ಠರ ಅನುಮತಿ ಮೇರೆಗೆ ವಿಭಾಗದ ಅಧ್ಯಕ್ಷ ಎಂ.ಡಿ.ಲಕ್ಷ್ಮೀನಾರಾಯಣ ಅವರು ದೀಪಕ್ ಕೋಟ್ಯಾನ್ ಅವರನ್ನು ಆಯ್ಕೆ ಮಾಡಿದ್ದಾರೆ.
ದೀಪಕ್ ಕೋಟ್ಯಾನ್ ಅವರು ಪ್ರಸ್ತುತ ಗೆಜ್ಜೆಗಿರಿ ಕ್ಷೇತ್ರಾಡಳಿತ ಸಮಿತಿ ಕೋಶಾಧಿಕಾರಿಯಾಗಿ ಹಾಗೂ ಬಿಲ್ಲವ ಕೀಕರಣ ಸಮಿತಿಯ ಪ್ರಾಧನ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

