ಬಂಟ್ವಾಳ: ತಾಲ್ಲೂಕಿನ ಸರಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಶನಿವಾರ ನಡೆದ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗೆ ಭೂಮಿ ಪೂಜೆ ಮತ್ತಿತರ ಸರ್ಕಾರಿ ಕಾರ್ಯಕ್ರಮದಲ್ಲಿ ಸರಪಾಡಿ ಪಂಚಾಯತ್ ಅಧ್ಯಕ್ಷ- ಉಪಾಧ್ಯಕ್ಷರು ಮತ್ತಿತರ ಜನಪ್ರತಿನಿಧಿಗಳನ್ನು ಕಡೆಗಣಿಸಲಾಗಿದೆ ಎಂದು ಗ್ರಾಮ ಪಂಚಾಯತ್ ಅಧ್ಯಕ್ಷೆ ಲೀಲಾವತಿ ಮತ್ತು ಉಪಾಧ್ಯಕ್ಷ ದಯಾನಂದ ಶೆಟ್ಟಿ ಮುನ್ನಲಾಯಿ ಆರೋಪಿಸಿದ್ದಾರೆ.
ಅಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಭೂಮಿಪೂಜೆ ನೆರವೇರಿಸಿದ್ದು, ಸ್ಥಳೀಯ ಜನಪ್ರತಿನಿಧಿಗಳಿಗೆ ಬದಲಾಗಿ ಹೊರಗಿನ ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು. ಸ್ಥಳೀಯ ಸದಸ್ಯರನ್ನು ಆಹ್ವಾನಿಸದೆ ಇಲ್ಲಿನ ಇಂಜಿನಿಯರಿಂಗ್ ವಿಭಾಗದ ಅಧಿಕಾರಿಗಳು ಗ್ರಾಮ ಪಂಚಾಯಿತಿಗೆ ಅಗೌರವ ತೋರಿದ್ದಾರೆ ಎಂದು ಪಂಚಾಯತ್ ಮಾಜಿ ಅಧ್ಯಕ್ಷ ಧನಂಜಯ ಶೆಟ್ಟಿ ದೂರಿದ್ದಾರೆ.
