30176227_2063585030548848_1701286006_o-696x394

ಉಡುಪಿ: ಕರ್ನಾಟಕದಲ್ಲಿ ಮೇ 12 ರಂದು ನಡೆಯುವ ಚುನಾವಣೆಯ ಹಿನ್ನಲೆಯಲ್ಲಿ ನಾಗರಿಕರಲ್ಲಿ ಮತದಾನದ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ರಾಜ್ಯ ಚುನಾವಣಾಧಿಕಾರಿಗಳು ಇಂದು ಉಡುಪಿಯ ಕ್ಲಾಕ್ ಟವರ್ ಬಳಿ ಬೃಹತ್ ಮತದಾನ ಜಾಗೃತಿ ಕಾರ್ಯ ಹಮ್ಮಿಕೊಳ್ಳಲಾಯಿತು.

30126427_2063585010548850_807874487_o-1-696x394

ಈ ಕಾರ್ಯಕ್ರಮದಲ್ಲಿ ಶಾಲಾ-ಕಾಲೇಜಿನ ವಿದ್ಯಾರ್ಥಿಗಳು ಬೃಹತ್ ಸಂಖ್ಯೆಯಲ್ಲಿ ಭಾಗವಹಿಸಿ ಸಾರ್ವಜನಿಕರಲ್ಲಿ ಮತದಾನದ ಬಗ್ಗೆ ಜಾಗೃತಿ ಮೂಡಿಸಿದರು.

30173725_2063584960548855_1475791058_o-696x394

ಒಂಟೆ, ಕುದರೆಗಳನ್ನು ಬಳಸಿಕೊಂಡು ಅತ್ಯಾಕರ್ಷಕವಾಗಿ ನಾಗರಿಕರನ್ನು ಮತದಾನ ನಡೆಸುವಂತೆ ಪ್ರೇರೆಪಿಸಲಾಗಿದೆ. ಮತದಾನ ನಮ್ಮ ಹಕ್ಕು ಅದನ್ನು ಚಲಾಯಿಸೋಣ, ಜನ ಸಾಮಾನ್ಯರ ಶಕ್ತಿ ಮತ ಚಲಾವಣೆ ಎಂಬಿತ್ಯಾದಿ ಘೋಷಣೆಗಳು ಕೇಳಿ ಬಂದವು. ಕರ್ನಾಟಕದಲ್ಲಿ ಮೇ 12 ಕ್ಕೆ ಮತದಾನ ನಡೆದು ಮೇ 15 ಕ್ಕೆ ಫಲಿತಾಂಶ ಹೊರ ಬೀಳಲಿದೆ. ಈಗಾಗಲೇ ರಾಜಕೀಯ ಪಕ್ಷಗಳು ಪ್ರಚಾರದಲ್ಲಿ ತೊಡಗಿಕೊಂಡಿವೆ.

By suddi9

Leave a Reply

Your email address will not be published. Required fields are marked *