161400-jail

ಬೆಳ್ತಂಗಡಿ: ಜಾಗ ಮಂಜೂರಾತಿಗೆ ಲಂಚ ಸ್ವೀಕರಿಸುತ್ತಿದ್ದ ತಾಲೂಕಿನ ಪುತ್ತಿಲ ಗ್ರಾಮ ಲೆಕ್ಕಾಧಿಕಾರಿಯನ್ನು ಭ್ರಷ್ಟಾಚಾರ ನಿಗ್ರಹ ದಳ ಶುಕ್ರವಾರ ಬಂಧಿಸಿದೆ.

ಗ್ರಾಮ ಲೆಕ್ಕಾಧಿಕಾರಿ ಹರೀಶ್ ಕುಮಾರ್ ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ.

ಜಾಗ ಮಂಜೂರಾತಿ ಮಾಡಿಕೊಡಲು ಮಹಿಳೆಯಿಂದ 5000 ರೂ. ಲಂಚ ಸ್ವೀಕರಿಸುವಾಗ ಎಸಿಬಿ ಪೊಲೀಸರು ಹರೀಶ್ ಕುಮಾರ್ ಅವರನ್ನು ಬಂಧಿಸಿದ್ದಾರೆ. ಗ್ರಾಮದ ಮಹಿಳೆಯೊಬ್ಬರ ದೂರಿನ ಮೇರೆಗೆ ಗ್ರಾಮ ಲೆಕ್ಕಾಧಿಕಾರಿಯನ್ನು ಭ್ರಷ್ಟಾಚಾರ ನಿಗ್ರಹ ದಳ ಬಂಧಿಸಿದೆ.

ಭ್ರಷ್ಟಾಚಾರ ನಿಗ್ರಹ ದಳ ಪಶ್ಚಿಮ ವಲಯ ಪೊಲೀಸ್ ಅಧೀಕ್ಷಕಿ ಶೃತಿ ಎನ್. ಎಸ್., ಇವರ ಮಾರ್ಗದರ್ಶನದಲ್ಲಿ ಎಸಿಬಿ ಡಿವೈಎಸ್ಪಿ ಸುಧೀರ್. ಎಂ. ಹೆಗಡೆ ಇವರ ನೇತ್ರೃತ್ವದ ತಂಡದಲ್ಲಿ ದಾಳಿ ನಡೆಸಲಾಗಿದೆ.

By suddi9

Leave a Reply

Your email address will not be published. Required fields are marked *