ಮಂಗಳೂರು: ಶೈಕ್ಷಣಿಕ ಚಟುವಟಿಕೆಗಳ ಭಾಗವಾಗಿ ರಾಜ್ಯವ್ಯಾಪ್ತಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಸಮುದಾಯದತ್ತ ಶಾಲಾ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, 2017-18ನೇ ಸಾಲಿನಲ್ಲಿ ಎರಡನೇ ಸಮುದಾಯದತ್ತ ಶಾಲಾ ಕಾರ್ಯಕ್ರಮವನ್ನು ಕ್ರಿಯಾತ್ಮಕವಾಗಿ ಹಾಗೂ ವ್ಯವಸ್ಥಿತವಾಗಿ ಆಯೋಜಿಸಲು ಎ.9 ರಂದು ಪ್ರಾಥಮಿಕ ಶಾಲೆ, ಎ. 10 ರಂದು ಪ್ರೌಢಶಾಲೆಗಳಲ್ಲಿ ನಡೆಸಿ ಯಶಸ್ವಿಗೊಳಿಸಲು ಸೂಚಿಸಲಾಗಿದೆ.
ಎ.14 ರಂದು ಶಾಲಾ ಹಂತದಲ್ಲಿ ಅಂಬೇಡ್ಕರ್ ಜಯಂತಿ ಆಚರಿಸಬೇಕಿದೆ. ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಕ್ರಮ ವಹಿಸಬೇಕು ಮತ್ತು ಚುನಾವಣಾ ಆಯೋಗ ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳ ಸೂಚನೆಗಳನ್ನು ಕಡ್ಡಾಯ ಪಾಲಿಸಬೇಕು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರ ಪ್ರಕಟಣೆ ತಿಳಿಸಿದೆ

