ಬಂಟ್ವಾಳ: ದ.ಕ ಜಿಲ್ಲಾ.ಪಂಚಾಯತ್, ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ಸರಕಾರಿ ಪದವಿಪೂರ್ವ ಕಾಲೇಜು ಅಜ್ಜಿಬೆಟ್ಟು ಬಿ.ಮೂಡ ಇದರ ಸಂಯುಕ್ತ ಆಶ್ರಯದಲ್ಲಿ ಪ್ರೌಢ ಶಾಲಾ ವಿಭಾಗದ ಬಂಟ್ವಾಳ ವಲಯ ಮಟ್ಟದ ಕಬಡ್ಡಿ ಪಂದ್ಯಾಟ ಅಜ್ಜಿಬೆಟ್ಟು ಶಾಲೆಯಲ್ಲಿ ನಡೆಯಿತು.

kbd1
ಕಾರ್ಯಕ್ರಮವನ್ನು ಉದ್ಘಾಟಿಸಿದ ಬಂಟ್ವಾಳ ಪುರಸಭಾ ಸದಸ್ಯ ಬಿ.ಮೋಹನ್ ಮಾತನಾಡಿ ಸರಕಾರ ಇತರ ಕ್ರೀಡೆಗಳಿಗೆ ನೀಡುವ ಪ್ರೋತ್ಸಾಹವನ್ನು ಕಬಡ್ಡಿಗೂ ನೀಡಿದಾಗ ಕ್ರೀಡಾಪಟುಗಳು ಉತ್ಸಾಹದಿಂದ ಭಾಗವಹಿಸುತ್ತಾರೆ. ಯಾವುದೇ ಕ್ರೀಡೆಗಳ ಬಗ್ಗೆ ತಾರತಮ್ಯವಹಿಸದೆ ಎಲ್ಲಾ ಕ್ರೀಡೆಗಳನ್ನು ಸಮಾನವಾಗಿ ನೋಡಿದಾಗ ಮಾತ್ರ ಕ್ರೀಡಾಪಟುಗಳು ಮತ್ತು ಕ್ರೀಡೆಯ ಉಳಿವು ಸಾಧ್ಯ ಎಂದರು.
ಕಾರ್ಯಕ್ರಮದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಶೇಷಶಯನ ಕಾರಿಂಜ, ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಗುರುನಾಥ ಬಿ.ಬಾಗೇವಾಡಿ, ರಾಷ್ಟ್ರಮಟ್ಟದ ಕಬಡ್ಡಿ ಆಟಗಾರ ಬೇಬಿ ಕುಂದರ್, ಸಮೂಹ ಸಂಪನ್ಮೂಲ ವ್ಯಕ್ತಿ ವೆಂಕಟರಾವ್, ಪ್ರೌಢ ಶಾಲಾ ಸಹಶಿಕ್ಷಕ ಸಂಘದ ಅಧ್ಯಕ್ಷ ಜೋಯ್ ಲೊಬೋ, ಶಾಲಾ ಶಿಕ್ಷಕ ರಕ್ಷಕ ಸಂಘದ ಸದಸ್ಯ ಶ್ರೀದರ್ ಅಮೀನ್, ಪ್ರಾಥಮಿಕ ಶಾಲಾ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಕೇಶವ ಮತ್ತು ಪ್ರಾಥಮಿಕ ಶಾಲಾ ಮುಖ್ಯಶಿಕ್ಷಕಿ ಕುಶಲ ಉಪಸ್ಥಿತರಿದ್ದರು. ಶಾಲಾ ಮುಖ್ಯ ಶಿಕ್ಷಕಿ ಸುಧಾ ವಿ.ಕಲ್ಮನೆ ಸ್ವಾಗತಿಸಿ , ಶಿಕ್ಷಕಿ ವಾಣಿ ವಂದಿಸಿದರು. ಶಿಕ್ಷಕಿ ಗೀತಾ ಕಾರ್ಯಕ್ರಮ ನಿರೂಪಿಸಿದರು.

By Suddi9

Leave a Reply

Your email address will not be published. Required fields are marked *