ಬೆಂಗಳೂರು: ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿರುವ ಜ್ಞಾನಪೀಠ ವಿಜೇತ ಸಾಹಿತಿ ಯು ಆರ್ ಅನಂತಮೂರ್ತಿ ಕಳೆದ 15 ದಿಗಳಿಂದ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದು, ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಸೇರಿಸಲಾಗಿದೆ. ಇವರಿಗೆ ಕಳೆದ 4 ದಿನಗಳಿಂದ ಐಸಿಯುನಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದ್ದು, ಕೃತಕ ಉಸಿರಾಟದ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ.

ಅವರ ಎರಡೂ ಕಿಡ್ನಿಗಳು ವಿಫಲಗೊಂಡಿದ್ದು, ಅದರೊಂದಿಗೆ ಹೃದಯ ಹಾಗೂ ಶ್ವಾಸಕೋಶದ ತೊಂದರೆಯೊಂದಿಗೆ ಬಳಲುತ್ತಿದ್ದಾರೆ. ಇವರಿಗೆ ಡಯಾಲಿಸಿಸ್ ಒದಗಿಸಲಾಗಿದೆ. ಅವರ ಆರೋಗ್ಯ ಸ್ಥಿತಿ ಮತ್ತಷ್ಟು ಹದಗೆಟ್ಟಿದೆ ಎಂದು ಅವರನ್ನು ನೋಡಿಕೊಳ್ಳುತ್ತಿರುವ ಮಣಿಪಾಲ್ ಆಸ್ಪತ್ರೆಯ ಮುಖ್ಯಸ್ಥ ಡಾ. ಸುದರ್ಶನ್ ಬಳ್ಳಾಲ್ ಮಾಧ್ಯಮವೊಂದಕ್ಕೆ ಮಾಹಿತಿ ನೀಡಿದ್ದಾರೆ.
