ksji3nyz

ಬೆಂಗಳೂರು:  ಮತ್ತೆ ಕಾಂಗ್ರೆಸ್ ಸೇರುತ್ತೇನೆ ಎಂಬುವುದು ಕೇವಲ ಸುಳ್ಳು ಸುದ್ದಿ. ಯಾವುದೇ ಸಂದರ್ಭದಲ್ಲೂ ನಾನು ಬಿಜೆಪಿ ಬಿಟ್ಟು ಕಾಂಗ್ರೆಸ್‍ಗೆ ಹೋಗುವುದಿಲ್ಲ ಎಂದು ಎಸ್.ಎಂ. ಕೃಷ್ಣ ವದಂತಿಗಳಿಗೆ ತೆರೆ ಎಲೆದಿದ್ದಾರೆ.

ಖಾಸಗಿ ವಾಹಿನಿಯೊಂದಕ್ಕೆ ಪ್ರತಿಕ್ರಿಯಿಸಿ ಮಾತನಾಡಿ ಅವರು, ನನ್ನ ಆರೋಗ್ಯ ಸಮಸ್ಯೆಯಿಂದ ಪಕ್ಷದ ಸಕ್ರಿಯ ಚಟುವಟಿಕೆಯಲ್ಲಿ ಭಾಗವಹಿಸಲು ಸಾಧ್ಯವಾಗುತ್ತಿಲ್ಲ. ನನ್ನ ಆರೋಗ್ಯ ಸಹಕರಿಸಿದರೆ ಈ ವಿಧಾನಸಭೆ ಚುನಾವಣೆಯಲ್ಲಿ ಅಭ್ಯರ್ಥಿಗಳ ಪರ ಪ್ರಚಾರ ನಡೆಸುತ್ತೇನೆ ಎಂದು ಮಾಹಿತಿ ನೀಡಿದರು.

ಕಾಂಗ್ರೆಸ್ ಪಕ್ಷ ಸೇರ್ಪಡೆಗೊಳಿಸಲೆಂದು ಸಚಿವ ಡಿ.ಕೆ. ಶಿವಕುಮಾರ್, ಪರಮೇಶ್ವರ್, ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್, ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಜತೆ ಮಾತುಕತೆ ನಡೆಸಿದ್ದೇನೆ ಎನ್ನುವುದು ಶುದ್ಧ ಸುಳ್ಳು ಎಂದವರು, ಬಿಜೆಪಿ ಬಗ್ಗೆ ನನಗೆ ಯಾವುದೇ ಅಸಮಾಧಾನ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಬಿಜೆಪಿ ಸೇರ್ಪಡೆಯಾಗಿದ್ದ ಹಿರಿಯ ರಾಜಕಾರಣಿ ಎಸ್‌.ಎಂ.ಕೃಷ್ಣ ಅವರು ಮರಳಿ ಕಾಂಗ್ರೆಸ್ ಗೆ ಸೇರ್ಪಡೆಯಾಗುತ್ತಿದ್ದಾರೆ ಎನ್ನುವ ವದಂತಿ ಸಾಮಾಜಿಕ ತಾಣದಲ್ಲಿ ಈ ಹಿಂದೆ ಹರಿದಾಡುತ್ತಿತ್ತು ಈ ಬಗ್ಗೆ ಎಸ್.ಎಂ. ಕೃಷ್ಣ ಸ್ಪಷ್ಟನೆ ನೀಡಿದ್ದಾರೆ.

 

By Suddi9

Leave a Reply

Your email address will not be published. Required fields are marked *