Stabbing-Symbolic-600

ಮಂಗಳೂರು: ಯುವಕನೋರ್ವನಿಗೆ ಕ್ಷುಲ್ಲಕ ಕಾರಣಕ್ಕೆ ಚೂರಿ ಇರಿದ ಘಟನೆ ನಗರದ ಕೊಣಾಜೆ ಪೋಲಿಸ್ ಠಾಣಾ ವ್ಯಾಪ್ತಿಯ ನಾಟೆಕಲ್ ನಲ್ಲಿ ಮಂಗಳವಾರ ತಡರಾತ್ರಿ ನಡೆದಿದೆ.

ಚೂರಿ ಇರಿತಕ್ಕೆ ಒಳಗಾದ ಯುವಕನನ್ನು ಕಿನ್ಯ ಹಿದಾಯತ್ ನಗರದ ಮೊಹಮ್ಮದ್ ಸಿದ್ದೀಕ್ ಎಂದು ಗುರುತಿಸಲಾಗಿದೆ.

ಸ್ನೇಹಿತನ ಪುತ್ರನಿಗೆ ಹಲ್ಲೆ ನಡೆಸಿದ ವಿಚಾರದಲ್ಲಿ ಪ್ರಶ್ನಿಸಿದ ಯುವಕನಿಗೆ ಚೂರಿಯಿಂದ ಇರಿಯಲಾಗಿದೆ ಎಂದು ತಿಳಿದು ಬಂದಿದೆ. ನಾಟೆಕಲ್ ನಿವಾಸಿ ಅಜ್ಮಲ್ ಎಂಬಾತ ಚೂರಿ ಇರಿದ ಆರೋಪಿಯಾಗಿದ್ದಾನೆ. ಹಿರಿಯ ಪೊಲೀಸ್ ಅಧಿಕಾರಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದು, ಆರೋಪಿ ಅಜ್ಮಲ್ ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಈ ಬಗ್ಗೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

By Suddi9

Leave a Reply

Your email address will not be published. Required fields are marked *