2000px-Flag_of_the_Indian_National_Congress.svg

ಮಂಗಳೂರು: ವಿಧಾನಸಭೆ ಚುನಾವಣೆಗೆ ಹಣಿಯಾಗುತ್ತಿರುವ ಕಾಂಗ್ರೆಸ್‌ ಇದೀಗ ತನ್ನ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಿದ್ದು, ಇನ್ನೊಂದೆಡೆ ಪಟ್ಟಿ ಬಿಡುಗಡೆಯಾಗುತ್ತಿದ್ದಂತೆ ಕಾರ್ಕಳದಲ್ಲಿ ಭಿನ್ನ ಮತ ಸ್ಪೋಟಗೊಂಡಿದೆ. ಕಾರ್ಕಳದಲ್ಲಿ ಕೆ.ಗೋಪಾಲ ಭಂಡಾರಿ ಹೆಸರು ಫೈನಲ್ ಆಗುತ್ತಿದ್ದಂತೆ ಕಾರ್ಕಳ ಕ್ಷೇತ್ರದ ಮತ್ತೋರ್ವ ಟಿಕೆಟ್ ಆಕಾಂಕ್ಷಿಯಾಗಿದ್ದ ಮುನಿಯಾಳು ಉದಯ್ ಶೆಟ್ಟಿ ಅಭಿಮಾನಿಗಳು ಮಾಜಿಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ಹಿರಿಯ ನಾಯಕ ವೀರಪ್ಪ ಮೊಯ್ಲಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವೀರಪ್ಪ ಮೊಯ್ಲಿ ವಿರುದ್ಧ ಉದಯ್ ಶೆಟ್ಟಿ ಅಭಿಮಾನಿಗಳು ಘೋಷಣೆ ಕೂಗಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಹಾಗೂ ಇಂದು ಕಾರ್ಕಳ ತಾಲೂಕು ಕಚೇರಿ ಮುಂಭಾಗ ಕಾಂಗ್ರೆಸ್ ಹೈಕಮಾಂಡ್ ವಿರುದ್ಧ ಪ್ರತಿಭಟನೆಗೆ ನಿರ್ಧರಿಸಿದ್ದಾರೆ.

By suddi9

Leave a Reply

Your email address will not be published. Required fields are marked *