CKM-ACCIDENT-AV-13-1000x563

ಚಿಕ್ಕಮಗಳೂರು: ಸರ್ಕಾರಿ ಬಸ್ ಹಾಗೂ ಕಾರು ನಡುವೆ ಮುಖಾಮುಖಿ ಢಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಹಿರೇಗೌಡ ಗ್ರಾಮದ ಬಳಿ ಶುಕ್ರವಾರ ನಡೆದಿದೆ.

ಮೃತರನ್ನ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ನಿವಾಸಿಗಳಾದ ನಿಂಗೇಶ್, ದೀಪಾ ಹಾಗೂ ಶ್ರೇಯಾ ಎಂದು ಗುರುತಿಸಲಾಗಿದೆ.

ನಿಂಗೇಶ್ ಕುಟುಂಬ ಕಾರಿನಲ್ಲಿ ಶಿವಮೊಗ್ಗದಿಂದ ಕೊಡ್ಲಿಪೇಟೆಗೆ ಹೋಗಿ ಚಿಕ್ಕಮಗಳೂರು ಮಾರ್ಗವಾಗಿ ಶಿವಮೊಗ್ಗಕ್ಕೆ ಹಿಂದಿರುಗುವಾಗ ಈ ದುರ್ಘಟನೆ ಸಂಭವಿಸಿದ್ದು, ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೊಬ್ಬರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಅಪಘಾತದಲ್ಲಿ ಮಗು ಜೇಷ್ಠ ಹಾಗೂ ಇನ್ನಿಬ್ಬರಿಗೆ ತೀವ್ರ ಗಾಯವಾಗಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಹಾಸನಕ್ಕೆ ರವಾನಿಸಲಾಗಿದೆ.

ಈ ಬಗ್ಗೆ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

 

By suddi9

Leave a Reply

Your email address will not be published. Required fields are marked *