ಗುರುಪುರ-ಕೈಕಂಬ: ಕುಥುವಾದ 8 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸೆಗಿ ಕೊಲೆ ನಡೆಸಿರುವುದನ್ನು ಖಂಡಿಸಿ ಎಸ್ಕೆಸ್ಸೆಸೆಫ್ ಕೈಕಂಬ ವಲಯ ಸಮಿತಿಯಿಂದ ಬೃಹತ್ ಪ್ರತಿಭಟನಾ ಸಭೆಯನ್ನು ಇಂದು(ಎ.20) ಸಂಜೆ 4ಕ್ಕೆ ಇಲ್ಲಿನ ಮುಖ್ಯ ಜಂಕ್ಷನ್ ನಲ್ಲಿ ಹಮ್ಮಿಕೊಳ್ಳಲಾಗಿದೆ.
ಪ್ರತಿಭಟನೆಯಲ್ಲಿ ಹುಸೈನ್ ದಾರಿಮಿ ರೆಂಜಲಾಡಿ, ಇಕ್ಬಾಲ್ ಬಾಳಿಲ ಮತ್ತಿತರರು ಮುಖ್ಯ ಗಣ್ಯರು ಭಾಗವಹಿಸಲಿದ್ದಾರೆ ಎಂದು ಅಬ್ದುಲ್ ಸಲಾಂ ಅಡ್ಡೂರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

