shobha-karandlaje

ಸುಳ್ಯ: ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಓರ್ವ ಕ್ರೂರಿ ಎಂದು ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಕಿಡಿಕಾರಿದ್ದಾರೆ.

ತಾಲೂಕಿನಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಬೃಹತ್  ಸಮಾವೇಶದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಹರಿಹಾಯ್ದಿದ್ದಾರೆ. ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಒರ್ವ ಕ್ರೂರಿಯಾಗಿದ್ದು, ಈ ರೀತಿಯ ಮುಖ್ಯಮಂತ್ರಿಯನ್ನು ರಾಜ್ಯ ಹಿಂದೆಂದೂ ಕಂಡಿಲ್ಲ ಎಂದು ಹೇಳಿದರು.

ಟಿಪ್ಪು ಸುಲ್ತಾನನ ಹೆಸರಿನಲ್ಲಿ ಧರ್ಮ ಧರ್ಮಗಳ ನಡುವೆ ಕಚ್ಚಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಡಿದ್ದಾರೆ. ಹಿಂದೂಗಳ ಮಧ್ಯೆ ಬಿರುಕನ್ನುಂಟು ಮಾಡಿ ಲಿಂಗಾಯುತ, ವೀರಶೈವರನ್ನು ಒಡೆಯುವ ಕೆಲಸ ಮಾಡಿದ್ದು ಕೂಡ ಮುಖ್ಯಮಂತ್ರಿ. ಕಳೆದ ಎಪ್ಪತ್ತು ವರ್ಷಗಳಿಗಿಂದೀಚೆಗೆ ಸಾಕಷ್ಟು ಮುಖ್ಯಮಂತ್ರಿಗಳು ರಾಜ್ಯವನ್ನಾಳಿದ್ದಾರೆ. ಆದರೆ ಇಂಥಹ ಮನಸ್ಥಿತಿಯ ಮುಖ್ಯಮಂತ್ರಿಯನ್ನು ಯಾವತ್ತೂ ಕಂಡಿಲ್ಲ ಎಂದು ಹೇಳಿದರು.

 

 

By suddi9

Leave a Reply

Your email address will not be published. Required fields are marked *