ಪುತ್ತೂರು: ಕರ್ನಾಟಕ ವಿಧಾನಸಭಾ ಚುನಾವಣೆಗೆ ಬಿಜೆಪಿಯಿಂದ ಸ್ಪರ್ಧಿಸಲಿರುವ, ಬಿಜೆಪಿ ಜಿಲ್ಲಾಧ್ಯಕ್ಷ ಸಂಜೀವ ಮಠಂದೂರು ಸೋಮವಾರ ನಾಮಪತ್ರ ಸಲ್ಲಿಸಿದ್ದಾರೆ.

ನಾಮಪತ್ರ ಸಲ್ಲಿಕೆ ಮುನ್ನ ಸಂಜೀವ ಅವರು ಬೆಳಗ್ಗೆ ಪುತ್ತೂರು ಶ್ರೀ ಮಹಮ್ಮಾಯಿ ದೇವಸ್ಥಾನದಲ್ಲಿ, ಕಲ್ಲಾರೆ ಶ್ರೀ ಗುರುರಾಘವೇಂದ್ರ ಮಠದಲ್ಲಿ, ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನದಲ್ಲಿ, ಬ್ರಹ್ಮಶ್ರೀ ನಾರಾಯಣ ಗುರುಮಂದಿರದಲ್ಲಿ, ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಪ್ರಾರ್ಥನೆ ಸಲ್ಲಿಸಲಾಯಿತು. ಬಳಿಕ ಸಾವಿರಾರು ಪಕ್ಷದ ಕಾರ್ಯಕರ್ತರೊಂದಿಗೆ ಮುಖ್ಯ ರಸ್ತೆಯಲ್ಲಿ ಸಾಗಿದ ಮೆರವಣಿಗೆ ಬಸ್ ನಿಲ್ದಾಣ-ಎಂ.ಟಿ.ರಸ್ತೆ-ಮಾರುಕಟ್ಟೆ ರಸ್ತೆಯಾಗಿ ತೆಂಕಿಲ ಸ್ವಾಮಿ ಕಲಾಮಂದಿರದಲ್ಲಿ ಸಮಾಪನಗೊಂಡು ಬಳಿಕ ಸಭೆ ನಡೆಯಿತು. 11.20 ರ ವೇಳೆಗೆ ಪಕ್ಷದ ಪ್ರಮುಖರೊಂದಿಗೆ ಮಿನಿ ವಿಧಾನ ಸೌಧಕ್ಕೆ ಆಗಮಿಸಿದ ಅಭ್ಯರ್ಥಿ ಸಂಜೀವ ಮಠಂದೂರು ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾಜಿ ಶಾಸಕಿ ಮಲ್ಲಿಕಾ ಪ್ರಸಾದ್, ಮಂಡಲ ಬಿಜೆಪಿ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ, ನಗರ ಮಂಡಲ ಬಿಜೆಪಿ ಅಧ್ಯಕ್ಷ ಜೀವಂಧರ್ ಜೈನ್, ನ್ಯಾಯವಾದಿ ಡಿ. ಶಂಭು ಭಟ್ ಉಪಸ್ಥಿತರಿದ್ದರು.

 

By suddi9

Leave a Reply

Your email address will not be published. Required fields are marked *