31-Narendra-Modi-Get

ಉಡುಪಿ: ಪ್ರಧಾನಿ ನರೇಂದ್ರ ಮೋದಿ ಮೇ 1ರಂದು ಉಡುಪಿಗೆ ಆಗಮಿಸಲಿದ್ದು, ಬಳಿಕ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಲಿದ್ದಾರೆ ಎಂದು  ಬಿಜೆಪಿ ಜಿಲ್ಲಾಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ತಿಳಿಸಿದ್ದಾರೆ.

ಸೋಮವಾರ ನಗರದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ವಿಧಾನಸಭೆ ಚುನಾವಣೆ ಪ್ರಚಾರಕ್ಕಾಗಿ ಮೇ 1ರಂದು ಮೋದಿ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದು, ಅಲ್ಲಿಂದ ಆದಿ ಉಡುಪಿ ಹೆಲಿಪ್ಯಾಡ್‌ ಮೂಲಕ ಉಡುಪಿಗೆ ಆಗಮಿಸಲಿದ್ದಾರೆ. ಬಳಿಕ ಶ್ರೀಕೃಷ್ಣ ಮಠಕ್ಕೆ ತೆರಳಿ ದೇವರ ದರ್ಶನ, ಪರ್ಯಾಯ ಶ್ರೀವಿದ್ಯಾಧೀಶ ತೀರ್ಥ ಹಾಗೂ ಪೇಜಾವರ ಶ್ರೀಗಳನ್ನು ಭೇಟಿ ಮಾಡಲಿದ್ದಾರೆ ಎಂದರು.

ಬೃಹತ್‌ ಸಮಾವೇಶ: ಮೇ 1ರಂದು ಮಧ್ಯಾಹ್ನ 3 ಗಂಟೆಗೆಎಂಜಿಎಂಮೈದಾನದಲ್ಲಿನಡೆಯುವಬೃಹತ್‌ ಸಮಾವೇಶದಲ್ಲಿಚುನಾವಣೆಪ್ರಚಾರಮಾಡಲಿದ್ದಾರೆ. ಈ ಸಮಾವೇಶದಲ್ಲಿ ದ.ಕ., ಕೊಡಗು, ಚಿಕ್ಕಮಗಳೂರು, ಉತ್ತರಕನ್ನಡಜಿಲ್ಲೆಯ 20 ಅಭ್ಯರ್ಥಿಗಳು ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.

 

By suddi9

Leave a Reply

Your email address will not be published. Required fields are marked *