ಬೆಳ್ತಂಗಡಿ: ದ.ಕ. ಜಿಲ್ಲೆಯ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಹರೀಶ್ ಪೂಂಜಾ ಸೋಮವಾರ ನಾಮಪತ್ರ ಸಲ್ಲಿಸಿದ್ದಾರೆ.
ಬೆಳ್ತಂಗಡಿಯಿಂದ ಈಗಾಗಲೇ ಟಿಕೆಟ್ ಪಡೆದಿರುವ ಹರೀಶ್ ಪೂಂಜಾ ಬಿಜೆಪಿಯ ಹೊಸಮುಖ. ಹರೀಶ್ ಪೂಂಜಾ ಕ್ಷೇತ್ರದೊಂದಿಗೆ ಹೆಚ್ಚಿನ ಒಡನಾಟವಿಟ್ಟುಕೊಂಡು ದುಡಿದವರು. ಹರೀಶ್ ಪೂಂಜಾ ಇಂದು ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸುವ ವೇಳೆ ಪಕ್ಷದ ನಾಯಕರು, ಕಾರ್ಯಕರ್ತರು ಭಾಗವಹಿಸಿದ್ದರು.


