ಪುತ್ತೂರು: ಕಟ್ಟಡವೊಂದರ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದ ವೇಳೆ ದರೆ ಕುಸಿದ ಪರಿಣಾಮ ಇಬ್ಬರು ಕಾರ್ಮಿಕರು ಮೃತಪಟ್ಟ ಘಟನೆ ಇಲ್ಲಿನ ನೆಲ್ಲಿಕಟ್ಟೆ ಎಂಬಲ್ಲಿ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದ ಬಳಿಯ ಅನಿತಾ ಅಯಿಲ್ ಮಿಲ್ಸ್ ಕಟ್ಟಡದ ಬಳಿ ನಡೆದಿದೆ.
ಘಟನೆಯಿಂದ ನಾಲ್ವರು ಕಾರ್ಮಿಕರು ಮಣ್ಣಿನಡಿ ಸಿಲುಕಿದ್ದರು. ಈ ಪೈಕಿ ಇಬ್ಬರನ್ನು ರಕ್ಷಿಸಲಾಗಿದ್ದು, ಗಂಭೀರ ಗಾಯಗೊಂಡಿದ್ದಾರೆ. ಇನ್ನುಳಿದ ಇಬ್ಬರು ಮಣ್ಣಿನಡಿ ಸಿಲುಕಿ ಉಸಿರುಗಟ್ಟಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಗಾಯಳುಗಳನ್ನು ಆಸ್ಪತ್ರೆಗೆ ದಾಖಲಾಗಿಸಲಾಗಿದೆ.
ಮೃತರನ್ನು ಉತ್ತರ ಕರ್ನಾಟಕ ಮೂಲದ ಕೂಲಿ ಕಾರ್ಮಿಕರು ಎಂದು ಹೇಳಲಾಗಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಠ ತಿಳಿದು ಬರಬೇಕಿದೆ.


