ಮಂಗಳೂರು: ಅಪರಿಚಿತ ವ್ಯಕ್ತಿಯೋರ್ವ ಮೃತದೇಹವೊಂದು ನದಿಯಲ್ಲಿ ಪತ್ತೆಯಾದ ಘಟನೆ ನಗರದ ನೇತ್ರಾವತಿ ನದಿಯಲ್ಲಿ ಗುರುವಾರ ನಡೆದಿದೆ.
ಬೆಳ್ಳಂಬೆಳಗೆ ಮೃತದೇಹದ ಪತ್ತೆಯಾಗುತ್ತಿದ್ದಂತೆ ಸಾರ್ವಜನಿಕರು ಬೆಚ್ಚಿಬಿದ್ದಿದ್ದು, ಕುತೂಹಲದಿಂದ ಪ್ರಯಾಣಿಕರು ಸೇತುವೆಯಲ್ಲಿ ವಾಹನಗಳನ್ನು ಅಡ್ಡಗಟ್ಟಿ ಮೃತದೇಹ ನೋಡಲು ಮುಂದಾಗಿದ್ದಾರೆ. ಇದರಿಂದ ವಾಹನ ಸಂಚಾರಕ್ಕೆ ಕೆಲಕಾಲ ಅಡ್ಡಿಯುಂಟಾಗಿದೆ.ಬಳಿಕ ಈ ಬಗ್ಗೆ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ರವಾನಿಸಿದ್ದಾರೆ.
ಸುದ್ದಿ ತಿಳಿದು ಘಟನಾ ಸ್ಥಳಕ್ಕಾಗಮಿಸಿದ ಪೊಲೀಸರು ಸುಗಮ ಸಂಚಾರಕ್ಕೆ ಅನುವು ಮಾಡಿ, ಮೃತದೇಹ ಮೇಲೆತ್ತುವ ಸಾಹಸಕ್ಕೆ ಮುಂದಾಗಿದ್ದು, ಮೃತದೇಹದ ಗುರುತು ಇನ್ನೂ ಪತ್ತೆಯಾಗಿಲ್ಲ ಎಂದು ತಿಳಿದು ಬಂದಿದೆ.


