image001congress-pressmeet-20160406-001

ಬಂಟ್ವಾಳ: ಈ ಬಾರಿಯು ಮತದಾರರು ಗರಿಷ್ಠ ಮತಗಳಿಂದ ಆಶೀರ್ವಾದ ಮಾಡುವ ನಿರೀಕ್ಷೆಯಿದ್ದು, ಕ್ಷೇತ್ರದ ಜನರು ಮತ್ತೊಮ್ಮೆ ಆಶೀರ್ವಾದ ಮಾಡಿದರೆ ದುಪ್ಪಟ್ಟು ಅಭಿವೃದ್ಧಿ ಮಾಡುತ್ತೇನೆ ಎಂದು ಸಚಿವ, ಕ್ಷೇತ್ರದ   ಅಭ್ಯರ್ಥಿ   ಬಿ. ರಮಾನಾಥ ರೈ ಭರವಸೆ ನೀಡಿದ್ದಾರೆ.

ತಾಲೂಕಿನ ಬಿ.ಸಿ.ರೋಡ್‌ನಲ್ಲಿರುವ ಪಕ್ಷದ ಕಾರ್ಯಾಲಯದಲ್ಲಿ  ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕ್ಷೇತ್ರದ ಜನರ ಅಭಿವೃದ್ಧಿಗಾಗಿ ಸದುಪಯೋಗಪಡಿಸಿಕೊಂಡ ತೃಪ್ತಿ ತನಗಿದೆ. ಧಾರ್ಮಿಕ ಕ್ಷೇತ್ರಗಳಿಗೆ ಗರಿಷ್ಠ ಅನುದಾನವನ್ನು ನೀಡುವ ಮೂಲಕ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸಿದ್ದೇನೆ. ತನ್ನ ಧರ್ಮವನ್ನು ಪ್ರೀತಿಸುವ ಮೂಲಕ ಇತರ ಧರ್ಮವನ್ನು ಗೌರವಿಸುವ ಕೆಲಸ ಮಾಡುತ್ತಿದ್ದೇನೆ ಎಂದವರು, ರಾಜ್ಯದಲ್ಲಿಯೇ ಬ್ರಹ್ಮಶ್ರೀ ನಾರಾಯಣ ಗುರು ಅವರ ಜಯಂತಿ ಆಚರಿಸುವ ಹೆಮ್ಮೆ ಬಂಟ್ವಾಳದ್ದು ಎಂದು ಹೇಳಿದರು.

By suddi9

Leave a Reply

Your email address will not be published. Required fields are marked *