congress-flags-fluttering-at-soni-gandhi-raaly-at-karol-bagh

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಭರ್ಜರಿ ಪ್ರಚಾರ ನಡೆಸುತ್ತಿರುವ ಕಾಂಗ್ರೆಸ್ ತನ್ನ ಚುನಾವಣಾ ಪ್ರಣಾಳಿಕೆಯನ್ನು ನಾಳೆ ಬಿಡುಗಡೆ ಮಾಡುವುದಾಗಿ ಹೇಳಿದೆ.

ಇಂದಿನಿಂದ ಎರಡು ದಿನಗಳ ರಾಜ್ಯ ಪ್ರವಾಸ ಕೈಗೊಂಡಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ನಾಳೆ(ಏಪ್ರಿಲ್ 27) ಬೆಳಗ್ಗೆ 9.45ಕ್ಕೆ ಮಂಗಳೂರಿನ ಟಿಎಂಎ ಪೈ ಕನ್ವೆಂಶನ್ ಸೆಂಟರ್’ನಲ್ಲಿ ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಲಿದ್ದಾರೆ.

ಉಳಿದಂತೆ ಬೆಂಗಳೂರು, ಕಲಬುರ್ಗಿ ಹಾಗೂ ಬೆಳೆಗಾವಿಯಲ್ಲಿ ಪ್ರಣಾಳಿಕೆ ಬಿಡುಗಡೆ ಮಾಡಲು ಕಾಂಗ್ರೆಸ್ ಆಲೋಚಿಸಿದ್ದು, ರಾಜ್ಯದಲ್ಲಿ ಒಟ್ಟು ನಾಲ್ಕು ಕಡೆ ಏಕಕಾಲದಲ್ಲಿ ಬಿಡುಗಡೆಯಾಗಲಿದೆ. ಕಾಂಗ್ರೆಸ್ ಹಿರಿಯ ನಾಯಕ ಮತ್ತು ಮಾಜಿ ಕೇಂದ್ರ ಸಚಿವ ಎಂ.ವೀರಪ್ಪ ಮೊಯ್ಲಿ ನೇತೃತ್ವದಲ್ಲಿ ಕಾಂಗ್ರೆಸ್ ಪ್ರಣಾಳಿಕೆ ಸಿದ್ಧಪಡಿಸಿದೆ.

ಕಳೆದ ಐದು ವರ್ಷಗಳಿಂದ ರಾಜ್ಯದಲ್ಲಿ ಯಶಸ್ವಿ ಆಡಳಿತ ನಡೆಸಿರುವ ಕಾಂಗ್ರೆಸ್, ಈ ಬಾರಿ ಮತದಾರ ಮನವೊಲಿಸಲು ಇನ್ನಾವ ನೂತನ ಅಂಶಗಳನ್ನು, ಯೋಜನೆಗಳನ್ನು ಪ್ರಣಾಳಿಕೆಯಲ್ಲಿ ಸೇರ್ಪಡೆಗೊಳಿಸಿದೆ ಎಂಬುದನ್ನು ಕಾದು ನೋಡಬೇಕಿದೆ.

By Suddi9

Leave a Reply

Your email address will not be published. Required fields are marked *