FLAG-696x434

ನವದೆಹಲಿ: ಕರ್ನಾಟಕ ಸರ್ಕಾರ ಅಧಿಕೃತ ನಾಡಧ್ವಜ ಹೊಂದಲು ಅನುಮತಿ ಕೋರಿ ಸಲ್ಲಿಸಿರುವ ಪ್ರಸ್ತಾವವನ್ನು, ರಾಜ್ಯದಲ್ಲಿಜಾರಿಯಲ್ಲಿರುವ ಚುನಾವಣಾ ನೀತಿ ಸಂಹಿತೆಯಿಂದಾಗಿ ಸದ್ಯಕ್ಕೆ ತಡೆಹಿಡಿಯಲಾಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ನಾಡಧ್ವಜಕ್ಕೆ ಅನುಮತಿ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿಯವರನ್ನು ಸೋಮವಾರಆಗ್ರಹಿಸಿದ್ದ ಹಿನ್ನೆಲೆಯಲ್ಲಿ ಗೃಹ ಸಚಿವಾಲಯ ಪ್ರತಿಕ್ರಿಯೆ ನೀಡಿದೆ.

‘ನಾನೊಬ್ಬ ಕನ್ನಡಿಗನೆಂದು ಮೋದಿ ಘೋಷಿಸಿಕೊಂಡಿರುವುದಕ್ಕೆ ಅವರಿಗೆ ಅಭಿನಂದನೆಗಳು ನೀವು ನಿಜವಾದ ಕನ್ನಡಿಗನೇ ಆಗಿದ್ದರೆ ಕನ್ನಡಭಾಷೆ, ನಾಡಗೀತೆ ಒಪ್ಪಿಕೊಳ್ಳಬೇಕು. ಪ್ರತ್ಯೇಕ ನಾಡಧ್ವಜಕ್ಕೆ ಅನುಮತಿ ಕೊಡಬೇಕು’ ಎಂದು ಸಿದ್ದರಾಮಯ್ಯ ಅವರು ಪ್ರಧಾನಿಗೆ‘#AnswerMadiModi’ ಹ್ಯಾಷ್‌ ಟ್ಯಾಗ್‌ ಮೂಲಕ ಟ್ವೀಟ್‌ನಲ್ಲಿ ಸವಾಲು ಹಾಕಿದ್ದರು.

By suddi9

Leave a Reply

Your email address will not be published. Required fields are marked *