RIDE_NNR_newsk_99188

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಖ್ಯಾತ ಉದ್ಯಮಿ ಹಾಗೂ ಶಿರಸಿ-ಸಿದ್ದಾಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಭೀಮಣ್ಣ ನಾಯ್ಕ ಅವರ ಮನೆಯ ಮೇಲೆ ಮಂಗಳವಾರ ತಡ ರಾತ್ರಿ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿದ್ದಾರೆ ಎನ್ನಲಾಗಿದೆ.

ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಅಯ್ಯಪ್ಪ ನಗರದ ಮನೆ ಮೇಲೆ ದಿಢೀರ್ ದಾಳಿ ನಡೆದಿದ್ದು ಉದ್ಯಮಿಯಾಗಿರುವ ಭೀಮಣ್ಣ ನಾಯ್ಕ ಅವರಿಗೆ ಸಂಬಂಧಿಸಿದಂತೆ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ ಎನ್ನಲಾಗಿದೆ.

ಹುಬ್ಬಳ್ಳಿಯಿಂದ ಬಂದ 8 ಜನರ ಆದಾಯ ತೆರಿಗೆ ಇಲಾಖೆಯ ತಂಡವು ಪೊಲೀಸರ ಸಮಕ್ಷಮದಲ್ಲಿ ದಿಢೀರ್ ಭೀಮಣ್ಣ ನಾಯ್ಕ ಮನೆಯ ಮೇಲೆ ದಾಳಿ ನಡೆಸಿದ್ದಾರೆ ಎನ್ನಲಾಗಿದೆ.

 

By suddi9

Leave a Reply

Your email address will not be published. Required fields are marked *