ಬೆಂಗಳೂರು: ಜಯನಗರ ಬಿಜೆಪಿ ಶಾಸಕ ವಿಜಯ್ ಕುಮಾರ್ (60) ಶುಕ್ರವಾರ ಮುಂಜಾವ ಸುಮಾರು 1ಗಂಟೆಗೆ ನಿಧನರಾಗಿದ್ದಾರೆ.
ಹಲವು ದಿನಗಳಿಂದ ಅವರು ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದರು. 2008 ಮತ್ತು 2013ರಲ್ಲಿ ಶಾಸಕರಾಗಿ ಆಯ್ಕೆ ಆಗಿದ್ದ ಅವರು, ಈ ಬಾರಿಯೂ ಕಣದಲ್ಲಿದ್ದರು. ಕ್ಷೇತ್ರದಲ್ಲಿ ಗುರುವಾರ ಚುನಾವಣಾ ಪ್ರಚಾರ ಮಾಡುವಾಗ ಕುಸಿದು ಬಿದ್ದ ಅವರನ್ನು ಜಯದೇವ ಆಸ್ಪತ್ರೆಗೆ ದಾಖಲಿಸಲಾಗಿತ್ತು.
‘ಆಸ್ಪತ್ರೆಗೆ ಕರೆತಂದಾಗಲೇ ಅವರ ಹೃದಯ ಬಡಿತ, ರಕ್ತದ ಒತ್ತಡ ಕುಸಿದಿತ್ತು. ಚಿಕಿತ್ಸೆ ಫಲಕಾರಿ ಆಗದೇ ಶುಕ್ರೌಆರ ಮುಂಜಾವ 1 ಗಂಟೆಗೆ ವಿಜಯ್ ಕುಮಾರ್ ವಿಧಿವಶರಾದರು’ ಎಂದು ಆಸ್ಪತ್ರೆಯ ನಿರ್ದೇಶಕ ಡಾ.ಮಂಜುನಾಥ್ ತಿಳಿಸಿದ್ದಾರೆ.

