BJP (1)

ಮಂಗಳೂರು: ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಮತಪ್ರಚಾರ ಬಿರುಸಿನಿಂದ ಸಾಗಿದ್ದು, ಬಿಜೆಪಿ ಅಭ್ಯರ್ಥಿ ವೇದವ್ಯಾಸ ಕಾಮತ್ ಪರ ಬಿಜೆಪಿ ಕಾರ್ಯಕರ್ತರು ಭರ್ಜರಿ ಪ್ರಚಾರದಲ್ಲಿ ತೊಡಗಿದ್ದಾರೆ.

ಈ ಮಧ್ಯೆ ಪೋರ್ಟ್ ವಾರ್ಡಿನ ಕಂದುಕ ಪ್ರದೇಶದ ಮೂವತ್ತಕ್ಕೂ ಅಧಿಕ ಮಂದಿ ಕಾಂಗ್ರೆಸ್ ಕಾರ್ಯಕರ್ತರು ಅಬ್ದುಲ್ ಸಲಾಂ ಕಂದುಕ  ನೇತೃತ್ವದಲ್ಲಿ ಬಿಜೆಪಿ ಸೇರಿದರು. ಇವರನ್ನು ಮಂಗಳೂರು ಮನಪಾ ಸದಸ್ಯರಾದ ಪ್ರೇಮಾನಂದ ಶೆಟ್ಟಿ, ಬಿಜೆಪಿ ಮುಖಂಡರ ಭಾಸ್ಕರ್ ಚಂದ್ರ ಶೆಟ್ಟಿ, ಸದಾನಂದ ನಾವರ, ಅನಿಲ್ ಕುಮಾರ್, ಶಶಿರಾಜ್ ಕೊಳಂಬೆ, ಅಲ್ಪಸಂಖ್ಯಾತ ಮೋರ್ಚಾದ ಮುತಾಲಿಬ್ ಉಪಸ್ಥಿತಿಯಲ್ಲಿ ಪಕ್ಷಕ್ಕೆ ಬರಮಾಡಿಕೊಳ್ಳಲಾಯಿತು.

ಪಕ್ಷಕ್ಕೆ ಸೇರ್ಪಡೆಗೊಂಡ ನಾಯಕರು ತಮ್ಮ ತಮ್ಮ ಕ್ಷೇತ್ರಗಳಲ್ಲಿ, ವಾರ್ಡ್ ಗಳಲ್ಲಿ ಬಿಜೆಪಿ ಪರ ಪ್ರಚಾರ ನಡೆಸಿ ಪಕ್ಷದ ಅಭ್ಯರ್ಥಿಯ ಗೆಲುವಿಗೆ ಶ್ರಮಿಸುವುದಾಗಿ ಭರವಸೆ ನೀಡಿದರು.

 

By suddi9

Leave a Reply

Your email address will not be published. Required fields are marked *