suliya090518

ಸುಳ್ಯ: ಯೋಗಿ ಆದಿತ್ಯನಾಥ್ ಮತ್ತು ನರೇಂದ್ರ ಮೋದಿಯವರ ಅಬ್ಬರದ ಚುನಾವಣೆ ಪ್ರಚಾರದ ಹಿನ್ನಲೆಯಲ್ಲಿ ಕರ್ನಾಟದಲ್ಲಿ ಬಿಜೆಪಿ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದ್ದು, ಮೇ16 ಕ್ಕೆ ಕಾಂಗ್ರೆಸ್ ಸರಕಾರ ಅಧಿಕಾರದಿಂದ ಕೆಳಗಿಳಲಿಯಲಿದೆ ಎಂದು ಕೇರಳ ರಾಜ್ಯದ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸುರೇಂದ್ರನ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.ಸುಳ್ಯದ ಚೆನ್ನಕೇಶವ ದೇವಾಲಯದ ಬಳಿ ಬಿಜೆಪಿ ವತಿಯಿಂದ ನಡೆದ ಸಮಾವೇಶದಲ್ಲಿ ಅವರು ಮಾತನಾಡಿದರು.

ವಿಧಾನಸಭಾ ಚುನಾವಣೆಯ ಮತ ಎಣಿಕೆಯ ಮೇ.15 ರ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ತಂಡ ಅರಬ್ಬಿಸಮುದ್ರ ಸೇರಲಿದೆ. ಚುನಾವಣಾ ಆರಂಭದಲ್ಲಿ ಉತ್ಸಹದಿಂದ ಬೀಗುತ್ತಿದ್ದ ಕಾಂಗ್ರೆಸ್ ಈಗ ಸಮ್ಮಿಶ್ರ ಸರಕಾರದ ಕನಸು ಕಾಣುತ್ತಿದೆ. ಈ ಭಾರಿ ಬಹುಮತದಿಂದ ಬಿಜೆಪಿ ಅಧಿಕಾರಕ್ಕೆ ಬರಲಿದೆ. ಚುನಾವಣೆಯ ಬಳಿಕ ರಾಹುಲ್ ಗಾಂಧಿ ಕಾಶಿಗೆ ಹೋಗಲು ಮಾತ್ರ ಸಾಧ್ಯ ಇದೆ ಎಂದರು.ಈ ವೇಳೆ ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷ ಎ.ವಿ.ತೀರ್ಥರಾಮ, ಅಭ್ಯರ್ಥಿ ಎಸ್.ಅಂಗಾರ, ಬಿಜೆಪಿ ಚುನಾವಣಾ ಉಸ್ತುವಾರಿ ಎ.ವಿ.ತೀರ್ಥರಾಮ ಮಾತನಾಡಿದರು.

ಸಮಾವೇಶದಲ್ಲಿ ಬಿಜೆಪಿ ಸುಳ್ಯ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ, ರಾಕೇಶ್ ರೈ ಕೆಡೆಂಜಿ ಮತ್ತು ವಿನಯಕುಮಾರ್ ಕಂದಡ್ಕ, ಬಿಜೆಪಿ ಮುಖಂಡರಾದ ಪ್ರಕಾಶ್ ಹೆಗ್ಡೆ, ಸುಲೋಚನಾ ಭಟ್, ಅಡ್ಡಂತ್ತಡ್ಕ ದೇರಣ್ಣ ಗೌಡ, ಚನಿಯ ಕಲ್ತಡ್ಕ, ಶೀಲಾವತಿ ಮಾಧವ, ಜಿ.ಪಂ.ಸದಸ್ಯರಾದ ಎಸ್.ಎನ್.ಮನ್ಮಥ, ಹರೀಶ್‌ಕಂಜಿಪಿಲಿ, ಆಶಾತಿಮ್ಮಪ್ಪ ಮೊದಲಾದವರು ವೇದಿಕೆಯಲ್ಲಿದ್ದರು.

By suddi9

Leave a Reply

Your email address will not be published. Required fields are marked *