ಮಂಗಳೂರು: ಪ್ರಜಾಪ್ರಭುತ್ವ ವ್ಯವಸ್ಥೆ ಹದಗೆಟ್ಟಿರುವ ಹಿನ್ನಲೆ ಮತ್ತು ರಾಜಕೀಯ ಹಣ, ಹೆಂಡಕ್ಕೆ ಬೇಸತ್ತು ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಆಶ್ಚರ್ಯಕ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದಲ್ಲಿ ನಡೆದಿದೆ.
ಮೃತ್ಯುಂಜಯ (60) ಹಾಗೂ ನೇತ್ರಾವತಿ (54) ಮೃತ ದುರ್ದೈವಿಗಳು. ಇವರು ಹಾವೇರಿ ಜಿಲ್ಲೆ ಬ್ಯಾಡಗಿ ಮೂಲದವರಾಗಿದ್ದು, ಧರ್ಮಸ್ಥಳದ ಲಾಡ್ಜ್ ನಲ್ಲಿ ಡೆತ್ ನೋಟ್ ಬರೆದಿಟ್ಟು ನೇಣಿಗೆ ಶರಣಾಗಿದ್ದಾರೆ.
ರಾಜಕೀಯದಲ್ಲಿ ಹಣ, ಹೆಂಡದಿಂದ ಕೀಳುಮಟ್ಟಕ್ಕೆ ಇಳಿದಿದೆ.ಪ್ರಜಾಪ್ರಭುತ್ವ ವ್ಯವಸ್ಥೆ ಹಾಳಾಗಿದೆ.ಇದ್ರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಡೆತ್ನೋಟ್ ನಲ್ಲಿ ಉಲ್ಲೇಖಿಸಿದ್ದಾರೆ.
ಹಾಳಾದ ಪ್ರಜಾಪ್ರಭುತ್ವವನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ನೋಡಿಕೊಳ್ಳಬೇಕು. ಅವರು ಸರಿ ದಾರಿಗೆ ತರುತ್ತಾರೆ ಅಂತಾ ಇಲ್ಲಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಉಲ್ಲೇಖವಾಗಿದೆ.
ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

