FIR

ಬೆಂಗಳೂರು: ಜಾಲಹಳ್ಳಿಯಲ್ಲಿ ವೋಟರ್ ಐಡಿ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಲಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ.

ಕಾಂಗ್ರೆಸ್ ಶಾಸಕ ಸೇರಿದಂತೆ 14 ಮಂದಿ ವಿರುದ್ಧ ಎಫ್ ಐಆರ್ ದಾಖಲಾಗಿದೆ. ಏಳು ಮಂದಿ ಮಹಿಳೆಯರು, ಏಳು ಮಂದಿ ಪುರುಷರ ಮೇಲೆ ಎಫ್ ಐಆರ್ ದಾಖಲಾಗಿದ್ದು,ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ 14 ನೇ ಆರೋಪಿಯಾಗಿದ್ದಾರೆ.

ಚುನಾವಣಾಧಿಕಾರಿಗಳ ದೂರಿನ ಅನ್ವಯ 120 e, 171 e, 171 f ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು,ಫಾರಿದ್, ಚಿನ್ನ ತಂಬಿ, ಪೊನ್ನಿಯಮ್ಮ ಲಕ್ಷಮ್ಮ, ಮಂಜುನಾಥ್ ಸೇರಿ ಹಲವರ ವಿರುದ್ಧ ಎಫ್ ಐಆರ್ ದಾಖಲಾಗಿದೆ.

ಖಾಸಗಿ ಅಪಾರ್ಟ್ಮೆಂಟ್ ನಲ್ಲಿ ವೋಟರ್ ಐಡಿ ಪತ್ತೆ ಪ್ರಕರಣ‌ಕ್ಕೆ ಸಂಬಂಧಿಸಿದಂತೆ ರಾಜರಾಜೇಶ್ವರಿ ನಗರ ಕಾಂಗ್ರೇಸ್ ಅಭ್ಯರ್ಥಿ ಮುನಿರತ್ನ ನಾಯ್ಡು ವಿರುದ್ದ ಚುನಾವಣಾ ಆಯೋಗ ಎಫ್ ಐ ಆರ್ ದಾಖಲಿಸಿದ್ದು, ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪದಡಿ 14 ನೇ ಆರೋಪಿಯಾಗಿ ಮುನಿರತ್ನ ವಿರುದ್ದ ಎಫ್ ಐ ಆರ್ ದಾಖಲಾಗಿದೆ.

By suddi9

Leave a Reply

Your email address will not be published. Required fields are marked *