ಬಂಟ್ವಾಳ: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಬಿ.ಸಿ. ರೋಡ್ ಪೇಟೆಯಲ್ಲಿ ಗುರುವಾರ ಭರ್ಜರಿ ರೋಡ್ ಶೋ ನಡೆಸುವ ಮೂಲಕ ಬಿಜೆಪಿ ಅಭ್ಯರ್ಥಿ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಪರ ಮತ ಯಾಚಿಸಿದರು.
ಇಲ್ಲಿನ ಕೈಕಂಬದ ಪೊಳಲಿ ದ್ವಾರದಿಂದ ತೆರೆದ ವಾಹನದಲ್ಲಿ ರಾಷ್ಟ್ರೀಯ ಹೆದ್ದಾರಿಯ ಬಿ.ಸಿ. ರೋಡಿನ ಮುಖ್ಯ ರಸ್ತೆಯಲ್ಲಿ ಸಾಗಿ ಬಂದ ರೋಡ್ ಶೋ, ಬ್ರಹ್ಮಶ್ರೀ ನಾರಾಯಣಗುರು ವೃತ್ತದ ಬಳಿಯ ಮೈದಾನದಲ್ಲಿ ಸಂಪನ್ನಗೊಂಡಿತು.
ಈ ಸಂದರ್ಭ ಸಂಸದ ನಳಿನ್ ಕುಮಾರ್ ಕಟೀಲ್, ಅಭ್ಯರ್ಥಿ ರಾಜೇಶ್ ನಾಯ್ಕ್ ಸಹಿತ ಪಕ್ಷದ ಪ್ರಮುಖರು ಭಾಗವಹಿಸಿದ್ದರು.


