Chamundeshwari-CM-Siddu

ಬಾಗಲಕೋಟೆ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎರಡು ಕ್ಷೇತ್ರಗಳಲ್ಲಿ ಚುನಾವಣೆಗೆ ಸ್ಪರ್ಧಿಸಿದ್ದಾರೆ. ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಅವರಿಗೆ ಹಿನ್ನಡೆಯಾಗಿದೆ. ಆದರೆ, ಬಾದಾಮಿ ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದ್ದಾರೆ.

ಬಾಗಲಕೋಟೆ ಜಿಲ್ಲೆಯ ಬಾದಾಮಿಯಲ್ಲಿ ಸಿದ್ದರಾಮಯ್ಯ ಅವರಿಗೆ 383 ಮತಗಳ ಮುನ್ನಡೆ ಸಿಕ್ಕಿದೆ. ಇಲ್ಲಿ ಬಿಜೆಪಿಯ ಶ್ರೀರಾಮುಲು ಅವರು ಸಿದ್ದರಾಮಯ್ಯ ಅವರ ಎದುರಾಳಿಯಾಗಿದ್ದಾರೆ.

ಮೊದಲ ಸುತ್ತಿನ ಮತ ಎಣಿಕೆಗೂ ಮುನ್ನ ಸಿದ್ದರಾಮಯ್ಯ ಅವರು ಮುನ್ನಡೆ ಸಾಧಿಸಿದ್ದರು. ಆದರೆ, ಎರಡನೇ ಸುತ್ತಿನ ಮತ ಎಣಿಕೆ ಆರಂಭವಾದ ತಕ್ಷಣ ಶ್ರೀರಾಮುಲು ಅವರು ಮುನ್ನಡೆ ಸಾಧಿಸಿದ್ದಾರೆ. ಬಿ.ಶ್ರೀರಾಮುಲು ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸ್ಪರ್ಧೆಯ ಕಾರಣ ಬಾದಾಮಿ ಕ್ಷೇತ್ರದ ಚುನಾವಣೆ ಕುತೂಹಲಕ್ಕೆ ಕಾರಣವಾಗಿದೆ. ಸಿದ್ದರಾಮಯ್ಯ ಅವರಿಗೆ ಚಾಮುಂಡೇಶ್ವರಿಯಲ್ಲಿ ಭಾರೀ ಹಿನ್ನಡೆ ಉಂಟಾಗಿದೆ.

By suddi9

Leave a Reply

Your email address will not be published. Required fields are marked *