ದಿಲ್ಲಿ: ಬಿಜೆಪಿ ಶಾಸಕಾಂಗ ಪಕ್ಷದ ನಾಯಕ ಬಿ.ಎಸ್. ಯಡಿಯೂರಪ್ಪ ಗುರುವಾರ ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲು ರಾಜ್ಯಪಾಲ ವಜು ಭಾಯ್ ವಾಲಾ ಹಸಿರು ನಿಶಾನೆ ತೋರಿಸುತ್ತಿದ್ದಂತೆ ಎಚ್ಚೆತ್ತುಕೊಂಡ ಕಾಂಗ್ರೆಸ್ ಇಂದು ರಾತ್ರಿ ಸುಪ್ರೀಂ ಕೋರ್ಟ್ ಮೊರೆ ಹೋಗಿದೆ.
ರಾಜ್ಯಪಾಲರ ನಡೆಯನ್ನು ಪ್ರಶ್ನಿಸಿರುವ ಕಾಂಗ್ರೆಸ್ ನ ಪ್ರಮುಖ ನಾಯಕರು, ಬಿಎಸ್ ವೈ ಪ್ರಮಾಣ ವಚನಕ್ಕೆ ತಡೆ ಏರುವವಂತೆ ಸುಪ್ರೀಂ ಕೋರ್ಟ್ ನ್ಯಾಯಧೀಶ ದೀಪಕ್ ಮಿಶ್ರ ಅವರಿಗೆ ಮನವಿ ಸಲ್ಲಿಸಿದ್ದಾರೆ.
ಮನವಿಯಲ್ಲಿ ಏನಿದೆ?: “ರಾಜ್ಯಪಾಲರ ಕ್ರಮ ಸಂವಿಧಾನದ ಎನ್ ಕೌಂಟರ್ ಆಗಿದೆ. ಗುರುವಾರ ಬಿಎಸ್ ವೈ ಪ್ರಮಾಣ ವಚನ ಕಾರ್ಯಕ್ರಮವನ್ನು ತಡೆಯಬೇಕು. ಈ ಬಗ್ಗೆ ಇಂದೇ ತಡರಾತ್ರಿ ವಿಚಾರಣೆ ನಡೆಸಿ ನ್ಯಾಯ ಒದಗಿಸಬೇಕು ಎಂದು ಮನವಿಯಲ್ಲಿ ಕಾಂಗ್ರೆಸ್ ಕೋರಿದೆ.

