ಬೆಳ್ತಂಗಡಿ: ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರಕಾರ ರಚಿಸಲು ಸಿದ್ಧವಾಗುತ್ತಿದ್ದಂತೆ ಕಾಂಗ್ರೆಸ್ ಕಾರ್ಯಕರ್ತರು ಹೊಸಂಗಡಿಯ ಕುರ್ಲೊಟ್ಟು ಎಂಬಲ್ಲಿ ವಿಜಯೋತ್ಸವ ಆಚರಿಸುತ್ತಿದ್ದ ವೇಳೆ ಘರ್ಷಣೆ ನಡೆದ ಪರಿಣಾಮ ಇಬ್ಬರು ಬಿಜೆಪಿ ಕಾರ್ಯಕರ್ತರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದರು. ಈ ಹಿನ್ನೆಲೆಯಲ್ಲಿ ಶಾಸಕ ಹರೀಶ್ ಪೂಂಜ ಅವರು ಆಸ್ಪತ್ರೆಗೆ ಭೇಟಿ ನೀಡಿ ಕಾರ್ಯಕರ್ತರ ಯೋಗಕ್ಷೇಮ ಆರೋಗ್ಯ ವಿಚಾರಿಸಿದರು.

