ಬೆಳ್ತಂಗಡಿ: ನಿಯೋಜಿತ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಮೇ 22ರಂದು ಬೆಳಗ್ಗೆ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸಲಿದ್ದಾರೆ. ಬೆಂಗಳೂರಿನಿಂದ ಹೆಲಿಕಾಪ್ಟರ್‍ನಲ್ಲಿ ಧರ್ಮಸ್ಥಳಕ್ಕೆ 8.30ಕ್ಕೆ ಆಗಮಿಸಲಿರುವ ಅವರು, ಶ್ರೀ ಮಂಜುನಾಥಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ಬಳಿಕ ಅವರು ಹೆಲಿಕಾಪ್ಟರ್ ನಲ್ಲಿ ಶ್ರಿಂಗೇರಿಗೆ ತೆರಳಲಿದ್ದಾರೆ.

